ಮನೆ ರಾಜ್ಯ ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ..!

ಮುಂದುವರಿದ ಚಿರತೆ ಹಾವಳಿ – ವ್ಯಕ್ತಿ ಮೇಲೆ ಏಕಾಏಕಿ ದಾಳಿ..!

0

ಚಾಮರಾಜನಗರ : ವ್ಯಕ್ತಿಯೊಬ್ಬರ ಮೇಲೆ ಚಿರತೆಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಚಿರತೆ ದಾಳಿಗೊಳಗಾದ ವ್ಯಕ್ತಿಯನ್ನು ರಾಜಶೇಖರಪ್ಪ ಎಂದು ಗುರುತಿಸಲಾಗಿದೆ.

ದಾಳಿಯಿಂದ ಅವರ ಮುಖ ಹಾಗೂ ಕತ್ತಿನ ಭಾಗಕ್ಕೆ ಪರಚಿದ ಗಾಯಗಳಾಗಿವೆ. ಆದರೂ ಧೈರ್ಯದಿಂದ ಪ್ರತಿರೋಧ ತೋರಿ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು, ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.