ಮನೆ ರಾಜಕೀಯ ಬಿಜೆಪಿ ಸೋಲಿಸಲು ಜೆಡಿಎಸ್ ನ್ನು ಕಾಂಗ್ರೆಸ್ ಬೆಂಬಲಿಸಲಿ: ಹೆಚ್.ಡಿ.ಕುಮಾರಸ್ವಾಮಿ

ಬಿಜೆಪಿ ಸೋಲಿಸಲು ಜೆಡಿಎಸ್ ನ್ನು ಕಾಂಗ್ರೆಸ್ ಬೆಂಬಲಿಸಲಿ: ಹೆಚ್.ಡಿ.ಕುಮಾರಸ್ವಾಮಿ

0

ಬೆಂಗಳೂರು(Bengaluru): ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್‌ ಅನ್ನು ಕಾಂಗ್ರೆಸ್‌ ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಕುರಿತು ಇಂದು ಟ್ವೀಟ್ ಮಾಡಿರುವ ಹೆಚ್.ಡಿ.ಕುಮಾರಸ್ವಾಮಿ,  ಜನತಾ ದಳ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು ಎಂದಿದ್ದಾರೆ.

ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು. ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್‌ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು.  ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ & ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ  ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಹಿಂದಿನ ಲೇಖನಮಹದೇಶ್ವರ ಬೆಟ್ಟದ ಮಳಿಗೆಯಲ್ಲಿ ಅಗ್ನಿ ಆಕಸ್ಮಿಕ: ಲಕ್ಷಾಂತರ ರೂ.ನಷ್ಟ
ಮುಂದಿನ ಲೇಖನಮದುವೆ ಮನೆ ಶಾವಿಗೆ ಪಾಯಸ ಸೇವಿಸಿ 30ಕ್ಕೂ ಹೆಚ್ಚು‌ ಮಂದಿ ಅಸ್ವಸ್ಥ: ಆಸ್ಪತ್ರೆಗೆ ದಾಖಲು