ಮನೆ ರಾಜ್ಯ ವೀರಶೈವ ಸಮುದಾಯವನ್ನು ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ: ಶಾಮನೂರು...

ವೀರಶೈವ ಸಮುದಾಯವನ್ನು ಸರ್ಕಾರದ ಒಬಿಸಿ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಲಿ: ಶಾಮನೂರು ಶಿವಶಂಕರಪ್ಪ

0

ದಾವಣಗೆರೆ: ಸಕಲ ವೀರಶೈವ ಸಮುದಾಯವನ್ನು ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಶಿಫಾರಸ್ಸು ಮಾಡಬೇಕು ಎಂದು ವೀರಶೈವ ಮಹಾಸಭೆಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಒತ್ತಾಯಿಸಿದರು.

ಹರಿಹರ ತಾಲೂಕಿನ ಹನಗವಾಡಿ ಬಳಿಯ ಪಂಚಮಸಾಲಿ ಗುರುಪೀಠದಲ್ಲಿ ಇಂದು ನಡೆದ ಹರ ಜಾತ್ರೆಯಲ್ಲಿ ಮಾತನಾಡಿದ ಅವರು, ಸರ್ಕಾರ ಯಾವುದೇ ರಾಜಕೀಯ ಮಾಡದೆ ಶಿಫಾರಸ್ಸು ಮಾಡಬೇಕು ಎಂದರು.

ವೀರಶೈವರು ಹಾಗೂ ಲಿಂಗಾಯತರು ಬೇರೆ ಬೇರೆ ಅಲ್ಲ, ಎಲ್ಲರೂ ಒಂದೇ. ವೀರಶೈವ ಲಿಂಗಾಯತರು ಒಳಪಂಗಡಗಳ ಬಗ್ಗೆ ತಲೆ ಕೆಡಿಸಿಕೊಳ್ಳಬಾರದು. ಎಲ್ಲಾ ವೀರಶೈವ ಲಿಂಗಾಯತರು ಒಂದೇ ಎಂಬುದನ್ನು ತಿಳಿಯಬೇಕು ಎಂದು ಹೇಳಿದರು.

ವೀರಶೈವ ಲಿಂಗಾಯತ ಸಮುದಾಯದ ಬಡ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗಕ್ಕೆ ಅನುಕೂಲ ಆಗುವ ದೃಷ್ಟಿಯಿಂದ ಸರ್ಕಾರ ಶಿಫಾರಸು ಮಾಡಲಿ. ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಗೆ ಸೇರ್ಪಡೆಗೆ ಶಿಫಾರಸ್ಸು ಮಾಡಬೇಕು. ಇತ್ತೀಚೆಗೆ ಪಂಚಮಸಾಲಿ ಸಮುದಾಯ ಹೆಚ್ಚು ಬೆಳವಣಿಗೆ ಹೊಂದುತ್ತಿದೆ. ಇದು ಸಂತಸದ ವಿಚಾರ ಎಂದರು.

ಹಿಂದಿನ ಲೇಖನಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನಎಟಿಎಂ ದೋಚಲು ಯತ್ನ: 21 ಲಕ್ಷ ರೂ. ನಗದು ಸುಟ್ಟು ಭಸ್ಮ