ಮನೆ ರಾಜ್ಯ ಬಸವಣ್ಣನವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳೋಣ: ಸಿಎಂ ಬಸವರಾಜ ಬೊಮ್ಮಾಯಿ

ಬಸವಣ್ಣನವರ ತತ್ವ, ಆದರ್ಶಗಳನ್ನು ಅಳವಡಿಸಿಕೊಳ್ಳೋಣ: ಸಿಎಂ ಬಸವರಾಜ ಬೊಮ್ಮಾಯಿ

0

ಬೆಂಗಳೂರು(Bengaluru)-12ನೇ ಶತಮಾನದಲ್ಲಿನ ಕ್ರಾಂತಿಕಾರಿ ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ಜನ್ಮದಿನ ಇಂದು. ಈ ಹಿನ್ನೆಲೆಯಲ್ಲಿ ನಾಡಿನೆಲ್ಲೆಡೆ ಬಸವೇಶ್ವರರ ಜಯಂತಿಯನ್ನು ಆಚರಿಸಲಾಗುತ್ತಿದೆ. ನಾಡಿನ ಜನತೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.

ಬೊಮ್ಮಾಯಿ ಅವರು ಟ್ವೀಟ್‌ ಮಾಡಿ, ನಾಡಿನ ಸಮಸ್ತ ಜನತೆಗೆ ಬಸವ ಜಯಂತಿಯ ಹಾರ್ದಿಕ ಶುಭಾಶಯಗಳು. “ಕಾಯಕ, ದಾಸೋಹ ತತ್ವಗಳ ಮೂಲಕ ಸಮಾನತೆಯನ್ನು ಸಾರುತ್ತಾ, ಸಕಲಜೀವರಾಶಿಗಳಿಗೂ ಲೇಸನ್ನು ಬಯಸಿದ ಮಹಾನ್ ಮಾನವತಾವಾದಿ ಅಣ್ಣ ಬಸವಣ್ಣನವರ ವಚನಗಳ ತತ್ವ, ಆದರ್ಶಗಳನ್ನು ನಿತ್ಯ  ಜೀವನದಲ್ಲಿ ಅಳವಡಿಸಿಕೊಳ್ಳೋಣ” ಎಂದು ಹೇಳಿದ್ದಾರೆ.

ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ಹರ್ಡೇಕರ ಮಂಜಪ್ಪನವರು 1913ರಲ್ಲಿ ಸಾರ್ವಜನಿಕವಾಗಿ ಬಸವ ಜಯಂತಿಯ ಆಚರಣೆ ಶುರು ಮಾಡಲು ನಿಶ್ಚಯಿಸಿದರು.

ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ಬಸವ ಜಯಂತಿ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕ ತಿಳಿಯದಿರುವುದು ದೊಡ್ಡ ಗೊಂದಲ ಸೃಷ್ಟಿಯಾಗಿತ್ತು. ಆಗ ಮುರುಘಾಮಠದ ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು ಅಕ್ಷಯ ತದಿಗೆಯಂದು ಬಸವ ಜಯಂತಿ ಆಚರಿಸಲು ತಿಳಿಸಿದರು. ಅಂದಿನಿಂದಲೂ ಅಕ್ಷಯ ತೃತೀಯದಂದು ಬಸವ ಜಯಂತಿ ಆಚರಿಸಿಕೊಂಡು ಬರಲಾಗುತ್ತಿದೆ.

ಈ ದಿನ ಎಲ್ಲ ಬಸವಣ್ಣನ ಬೆಂಬಲಿಗರು ಅವರ ಸಂದೇಶಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಸಮಾಜಕ್ಕೆ ಬಸವಣ್ಣನವರು ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾರೆ. ಜೊತೆಗೆ ಬಸವಣ್ಣನ ವಚನಗಳು ಎಲ್ಲೆಡೆ ಹರಿದಾಡುತ್ತವೆ.

ಬೊಮ್ಮಾಯಿ ಅವರು ಬಸವ ಜಯಂತಿಗೆ ಶುಭಕೋರಿರುವುದರ ಜೊತೆಗೆ ಪವಿತ್ರ ರಂಜಾನ್‌ ಹಾಗೂ ಅಕ್ಷಯ ತೃತೀಯಗೂ ಶುಭಶಾಯ ಕೋರಿದ್ದಾರೆ.

ಹಿಂದಿನ ಲೇಖನಸೇನಾಪಡೆಯಿಂದ ಎಲ್‌ ಇಟಿಯ 3 ಉಗ್ರರ ಬಂಧನ
ಮುಂದಿನ ಲೇಖನರಾಜ್ಯಕ್ಕೆ ಆಗಮಿಸಿದ ಅಮಿತ್‌ ಶಾ: ನಾಯಕತ್ವ ಬದಲಾವಣೆ ಕುರಿತು ಹೆಚ್ಚಿದ ಕುತೂಹಲ