ಮನೆ ರಾಜ್ಯ ಮೊದಲು ಕಾಂಗ್ರೆಸ್ ಶಾಸಕರ ಬಗ್ಗೆ ಗಮನಹರಿಸಲಿ, ಆಮೇಲೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ: ಸಿಪಿವೈಗೆ...

ಮೊದಲು ಕಾಂಗ್ರೆಸ್ ಶಾಸಕರ ಬಗ್ಗೆ ಗಮನಹರಿಸಲಿ, ಆಮೇಲೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ: ಸಿಪಿವೈಗೆ ಸಾ.ರಾ ಮಹೇಶ್ ತಿರುಗೇಟು

0

ಮೈಸೂರು: ಜೆಡಿಎಸ್ ಶಾಸಕರನ್ನ ಕರೆ ತರುತ್ತೇನೆ ಎಂಬ ಶಾಸಕ ಸಿಪಿ ಯೋಗೇಶ್ವರ್ ಹೇಳಿಕೆಗೆ ಟಾಂಗ್ ಕೊಟ್ಟಿರುವ  ಮಾಜಿ ಸಚಿವ ಸಾರಾ ಮಹೇಶ್, ಮೊದಲು ಕಾಂಗ್ರೆಸ್ ಪಕ್ಷದ ಶಾಸಕರ ಬಗ್ಗೆ ಗಮನಹರಿಸಲಿ. ಆಮೇಲೆ ಬೇಕಿದ್ದರೆ ಜೆಡಿಎಸ್ ಶಾಸಕರ ಖರೀದಿ ಬಗ್ಗೆ ಮಾತನಾಡಲಿ ಎಂದು ತಿರುಗೇಟು ನೀಡಿದ್ದಾರೆ.

Join Our Whatsapp Group

ಇಂದು ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಸಾ.ರಾ ಮಹೇಶ್,  ಚನ್ನಪಟ್ಟಣದಲ್ಲಿನ ಜನ ಯೋಗೇಶ್ವರ್ ಗೆ ಆಶೀರ್ವಾದ ಮಾಡಿದ್ದಾರೆ. ಇನ್ನು ಮೂರು ವರ್ಷ ಜನರ ಸೇವೆ ಮಾಡುವ ಅವಕಾಶವಿದೆ. ಕಾಂಗ್ರೆಸ್ ನಲ್ಲಿ 30, 35ಶಾಸಕರು ಅಸಮಾಧಾನಿತರಿದ್ದಾರೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ರು. ಅವರು ಯಾರ್ಯಾರು ಅಂತ ಯೋಗೇಶ್ವರ್ ಗೆ ಚೆನ್ನಾಗಿ ಗೊತ್ತು. ಮೊದಲು ಕಾಂಗ್ರೆಸ್ ಅಸಮಾಧಾನಿತ ಶಾಸಕರ ಹೆಸರುಗಳನ್ನ ಸಿಎಂ, ಡಿಸಿಎಂ ಬಳಿ ಕೊಡಲಿ. ಆಮೇಲೆ ಜೆಡಿಎಸ್ ಶಾಸಕರ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.

ಕುಮಾರಸ್ವಾಮಿಯವರನ್ನ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದವರ ಪೈಕಿ ಇವರದ್ದು ಪ್ರಮುಖ ಪಾತ್ರ ಇದೆ.  ಇವರೇನು ಅಂತ ನಮಗೂ ಗೊತ್ತಿದೆ. ಜೆಡಿಎಸ್ ಪ್ರಾದೇಶಿಕ ಪಕ್ಷವಾದರೂ ನಮ್ಮ ಶಾಸಕರು ದೇವೇಗೌಡರು, ಕುಮಾರಸ್ವಾಮಿ ಜೊತೆ ವಿಶ್ವಾಸದಲ್ಲಿದ್ದಾರೆ. ಯೋಗೇಶ್ವರ್ ತಮ್ಮ ಸರ್ಕಾರ ಉಳಿಸಿಕೊಳ್ಳುವ ಕೆಲಸ ಮಾಡಲಿ ಎಂದು ಸಾ.ರಾಹೇಶ್ ಹೇಳಿದರು.