ಮನೆ ಕಾನೂನು ಪಿಎಸ್ಐ ಪರಶುರಾಮ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆ

ಪಿಎಸ್ಐ ಪರಶುರಾಮ ಮನೆಯಲ್ಲಿ ಶಾಸಕ ಚೆನ್ನಾರೆಡ್ಡಿ ಲೆಟರ್​ ಹೆಡ್​​ ಪತ್ತೆ

0

ಯಾದಗಿರಿ: ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

Join Our Whatsapp Group

ಸಿಐಡಿ ಅಧಿಕಾರಿಗಳು ಗುರುವಾರ (ಆಗಸ್ಟ್​.08) ರಂದು ಪೊಲೀಸ್​ ವಸತಿ ಗೃಹದ ಪರಶುರಾಮ ಮನೆಗೆ ತೆರಳಿ ಸ್ಥಳ ಮಹಜರು ನಡೆಸಿದ್ದಾರೆ. ಮನೆಯಲ್ಲಿ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಹೆಸರಿನ ಲೆಟರ್​ ಹೆಡ್​ ಪತ್ತೆಯಾಗಿದೆ. ಕಾನೂನು ಸುವ್ಯವಸ್ಥೆ ಪೋಸ್ಟಿಂಗ್ ಬೇರೆಯವರಿಗೆ ಕೊಟ್ಟ ಹಿನ್ನೆಲೆಯಲ್ಲಿ ಅಪರಾಧ ವಿಭಾಗದ ಪೋಸ್ಟಿಂಗ್ ಕೊಡಿ ಎಂದು ಪರಶುರಾಮ ಕೇಳಿದ್ದರು. ಇದೇ ಕಾರಣಕ್ಕೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಲೆಟರ್ ಹೆಡ್ ನೀಡಿದ್ದರು.

ಈ ಲೆಟರ್​ ಹೆಡ್​​ ಸಿಐಡಿ ಅಧಿಕಾರಿಗಳು ಮಹಜರು ವೇಳೆ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.

ಯಾದಗಿರಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್​ಐ ಪೋಸ್ಟಿಂಗ್​ಗಾಗಿ ಶಾಸಕ ಚೆನ್ನಾರೆಡ್ಡಿ 15 ಲಕ್ಷ ರೂ. ಕೇಳಿದ್ದರು ಎನ್ನಲಾಗಿದೆ. ಹೀಗಾಗಿ ಪಿಎಸ್​ಐ ಪರಶುರಾಮ ಹಣ ಹೊಂದಿಸುತ್ತಿದ್ದರು. ವಸತಿ ಗೃಹದಲ್ಲಿ ಪೋಸ್ಟಿಂಗ್​ಗಾಗಿ ಕೂಡಿಟ್ಟ 7.33 ಲಕ್ಷ ನಗದು ಸಿಕ್ಕಿದ್ದು, ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪರಶುರಾಮ ಅವರಿಗೆ ಸೇರಿದ ನಾಲ್ಕು ಬ್ಯಾಂಕ್ ಖಾತೆಯಲ್ಲಿನ ಹಣದ ಮಾಹಿತಿಯನ್ನೂ ಸಹ ಸಿಐಡಿ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಜೊತೆಗೆ ಇಲಾಖಾ ರಿವಾಲ್ವರ್​ (ಬಂದೂಕು), ಸಿಮ್​ಕಾರ್ಡ್​​, ಮೊಬೈಲ್ ಮತ್ತು ವಾಕಿಟಾಕಿ ಜಪ್ತಿ ಮಾಡಿದ್ದಾರೆ. ಪರಶುರಾಮ ಮೃತಪಟ್ಟ ಜಾಗದಲ್ಲಿ ಮುಗಿನಿಂದ ಬಾಯಿಂದ ಬಂದ ರಕ್ತದ ಮಾದರಿ ಸಹ ಸಂಗ್ರಹಿಸಲಾಗಿದೆ.

ಮೃತ ಪಿಎಸ್​ಐ ಪರಶುರಾಮ ಪ್ರತಿಯೊಂದು ಕರೆಗಳನ್ನು ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಪೋಸ್ಟಿಂಗ್ ಆಗದೆ ಇರುವ ಬಗ್ಗೆ, ಸ್ನೇಹಿತರು ಮತ್ತು ಕಟುಂಬಸ್ಥರ ಮುಂದೆ ಪೋಸ್ಟಿಂಗ್ ಹಣ ಕೇಳಿರುವ ದೂರವಾಣಿ ಮೂಲಕ ಸಂಭಾಷಣೆ ಮಾಡಿದ್ದಾರೆ. ಎಲ್ಲ ಸಂಭಾಷಣೆಗಳ ಆಡಿಯೋ ಮೊಬೈಲ್​​ನಲ್ಲಿವೆ.

ಯಾದಗಿರಿ ಸೈಬರ್ ಕ್ರೈಂ ಠಾಣೆಯ ಪಿಎಸ್​​ಐ ಆಗಿದ್ದ ಪರಶುರಾಮ ಮನೆಯಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾರೆ. ಪಿಎಸ್​ಐ ಪರಶುರಾಮ ಸಾವಿಗೆ ಕಾಂಗ್ರೆಸ್​ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಪಂಪಾಗೌಡ ಕಾರಣವೆಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಈಗಾಗಲೆ ಶಾಸಕ ಚೆನ್ನಾರೆಡ್ಡಿ ವಿರುದ್ಧ ಜಾತಿ ನಿಂದನೆ ಆರೋಪದಡಿ ದೂರು ದಾಖಲಾಗಿದೆ. ಪಿಎಸ್ಐ ಪರಶುರಾಮ ಸಾವು ಬಳಿಕ ಶಾಸಕ ಚೆನ್ನಾರೆಡ್ಡಿ ನಾಪತ್ತೆಯಾಗಿದ್ದಾರೆ.