ಮನೆ ಸ್ಥಳೀಯ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಂದ್ರ

ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಸದುಪಯೋಗಪಡಿಸಿಕೊಳ್ಳಿ: ಚಂದ್ರ

0

ಮೈಸೂರು: ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ, ಮತ್ತು ರಂಗಸಮುದ್ರ ಗ್ರಾಮ ಪಂಚಾಯತಿ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಮುದಾಯ ಭವನದ ಹತ್ತಿರ ರಂಗಾಚಾರಿಹುಂಡಿ ಗ್ರಾಮದಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಟಿ. ನರಸೀಪುರ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಪಂಚಾಯ್ತಿ ಚಂದ್ರ ಉಧ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಮಹಿಳೆಯರಿಗೆ ಮತ್ತು ಪುರುಷರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ಸಮನಾದ ಕೂಲಿ ಇದ್ದು, ಎಲ್ಲರೂ ಇದರ ಸದುಪಯೋಗಪಡಿಸಿಕೊಳ್ಳಿ. ನಾವು ಕೆಲಸ ನೀಡಲು ಸಿದ್ದರಿದ್ದೇವೆ ಎಂದು ತಿಳಿಸಿದರು.

ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ ನಿರ್ದೇಶಕರಾದ ಸರಸ್ವತಿ ಮಾತನಾಡಿ, ಸಂಸ್ಥೆಯು ಕಳೆದ 40 ವರ್ಷಗಳಿಂದಲೂ ಕರ್ನಾಟಕದ 8 ಜಿಲ್ಲೆಗಳಲ್ಲಿ 56 ಕೊಳಚೆ ಪ್ರದೇಶಗಳಲ್ಲಿ ಹಾಗೂ 196 ಗ್ರಾಮಗಳಲ್ಲಿ ಜನಾಭಿವೃದ್ಧಿ, ಮಕ್ಕಳಾಭಿವೃದ್ಧಿ, ಯುವಜನರು, ಮಹಿಳೆಯರು ಹಾಗೂ ಸಮುದಾಯ ಆರೋಗ್ಯ ಹಾಗೂ ಶಿಕ್ಷಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದೆ. ಜಗತ್ತಿನ ಎಲ್ಲ ದೇಶಗಳು ಸಹ ಅಭಿವೃದ್ಧಿಯ ಪಥದಲ್ಲಿ ತಾವು ಮುಂಚೂಣಿಯಲ್ಲಿರಬೇಕು ಎಂದು ಬಯಸುತ್ತಿರುವ ಈ ಸಂದರ್ಭದಲ್ಲಿ, ತಂತ್ರಜ್ಞಾನ, ಆವಿಷ್ಕಾರಗಳೊಂದಿಗೆ ಅನ್ಯಗ್ರಹದಲ್ಲಿ ವಾಸಿಸಲು ಯೋಗ್ಯ ಸ್ಥಳವನ್ನು ಹುಡುಕುತ್ತಿರುವ ಪ್ರಯತ್ನಗಳ ಸಂದರ್ಭದಲ್ಲಿ ಇಂದು ಮಹಿಳೆಯರು ಒಂದೇ ಕ್ಷೇತ್ರಕ್ಕೆ ಮೀಸಲಿರದೆ ತಂತ್ರಜ್ಞಾನ, ಆರ್ಥಿಕ, ರಾಜಕೀಯ, ರಕ್ಷಣೆ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲಿಯೂ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಕೊಡುಗೆಯನ್ನು ಸ್ಮರಿಸಲು ಈ ದಿನವನ್ನು ಅವರಿಗೆ ಮೀಸಲಿರಿಸಲಾಗಿದೆ. ಹಾಗೂ ಅಂದು ಅವರ ಕೊಡುಗೆಯನ್ನು ನೆನೆಯುತ್ತಾ ಮಹಿಳಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಎಂದು ತಿಳಿಸಿದರು.

ಲೇಖಕಿ ಹಾಗೂ ಮಹಿಳಾ ಹೋರಾಟಗಾರ್ತಿ ವನಜ ಮಾತನಾಡುತ್ತಾ, ಭಾರತದಲ್ಲಿ ಮಹಿಳೆಯರ ಪ್ರಮುಖ ಕಾನೂನು ಹಕ್ಕುಗಳು, ಲಿಂಗ ಸಮಾನತೆಯನ್ನು ಉತ್ತೇಜಿಸುವ ಮತ್ತು ಮಹಿಳೆಯರ ಹಿತಾಸಕ್ತಿಗಳನ್ನು ರಕ್ಷಿಸುವ ಪ್ರಯತ್ನದಲ್ಲಿ ಭಾರತೀಯ ಕಾನೂನಿನ ಅಡಿಯಲ್ಲಿ ಮಹಿಳೆಯರಿಗೆ ಒದಗಿಸಲಾದ ಹಕ್ಕುಗಳನ್ನು ಕಾಲಾನಂತರದಲ್ಲಿ ಗಮನಾರ್ಹವಾಗಿ ಬಲಪಡಿಸಲಾಗಿದೆ. ಭಾರತದಲ್ಲಿ, ಕಾನೂನು ಮಹಿಳೆಯರಿಗೆ ಹಲವಾರು ಮಹತ್ವದ ರಕ್ಷಣೆಗಳನ್ನು ಖಾತರಿಪಡಿಸುತ್ತದೆ ಎಂದು ತಿಳಿಸಿದರು.

ಮಹಿಳೆಯರು ಅವರವರ ಗ್ರಾಮದಲ್ಲಿ ಕ್ರೀಡೆಗಳನ್ನು ಆಡಿದ್ದು ಗೆದ್ದಿರುವ ಮಹಿಳೆಯರಿಗೆ ಬಹುಮಾನಗಳನ್ನು ನೀಡಲಾಯಿತು. ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಆಟೋ ಚಾಲನೆ ಮಾಡುತ್ತಿರುವ ಮಹಿಳೆಯರಾದ ಶ್ರೀಮತಿ ರೇಖಾ ರಂಗಸಮುದ್ರ, ಶ್ರೀಮತಿ ವಾಣಿ ಮೆಲ್ಲಹಳ್ಳಿ, ಕು. ವಿಜಯಲಕ್ಷಿ ಡಿ. ದಂಡಿಕೆರೆ ಇವರಿಗೆ ಸನ್ಮಾನ ಮಾಡಲಾಯಿತು

ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಸುಜಾತ ರಂಗಸ್ವಾಮಿ,  ಉಪಾಧ್ಯಕ್ಷ ಎಲ್.ಸಿ.ಆನಂದ, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮೊಹಮ್ಮದ್ ಇಸ್ಹಾಕ್, ಸದಸ್ಯರಾದ ರತ್ನ, ಪುಟ್ಟಸ್ವಾಮಿ, ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರು ರೂಪಶ್ರೀ, ಸಂಜೀವಿನಿ ಟಿ. ನರಸೀಪುರ  ಹಾಗೂ ಈ ಕಾರ್ಯಕ್ರಮದಲ್ಲಿ 200ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿದ್ದರು.