ಮನೆ ಸುದ್ದಿ ಜಾಲ ನಿಯಮಾನುಸಾರ ಮದ್ಯದ  ಅಂಗಡಿಗಳಿಗೆ ಪರವಾನಗಿ: ಸಚಿವ ಕೆ.ಗೋಪಾಲಯ್ಯ

ನಿಯಮಾನುಸಾರ ಮದ್ಯದ  ಅಂಗಡಿಗಳಿಗೆ ಪರವಾನಗಿ: ಸಚಿವ ಕೆ.ಗೋಪಾಲಯ್ಯ

0

ಬೆಂಗಳೂರು: ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ನಿಯಮಾನುಸಾರವೇ  ಸರ್ಕಾರಿ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ವಿಧಾನಸಭೆಗಿಂದು ತಿಳಿಸಿದರು.

ಕುಣಿಗಲ್ ಕ್ಷೇತ್ರದ ಶಾಸಕ ಡಾ.ರಂಗನಾಥ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ ಮೂರು ವರ್ಷಗಳಲ್ಲಿ ಕುಣಿಗಲ್ ಕ್ಷೇತ್ರದಲ್ಲಿ 5 ಎಂಎಸ್ ಐ ಎಲ್ ಮದ್ಯದ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ ಎಂದರು.

ಶಾಸಕರು ಮತ್ತು ಮಹಿಳೆಯರು ಮದ್ಯದ ಅಂಗಡಿ ಬೇಡ ಎಂದ ಕಡೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಿ ಅಂಗಡಿಗಳಿಗೆ ಪರವಾನಗಿ ನೀಡಲಾಗಿದೆ. ಯಾವುದೇ ಹ‌ಂತದಲ್ಲೂ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿಲ್ಲ ಎಂದು ಉತ್ತರಿಸಿದರು.