ನವದೆಹಲಿ (New Delhi)-ಭಾರತೀಯ ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು (B.S.Raju)ಅವರು ನೇಮಕಗೊಂಡಿದ್ದಾರೆ.
ರಾಜು ಅವರು ಮೇ 1 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸೇನಾ ಉಪ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ನೂತನ ಸೇನಾ ಮುಖ್ಯಸ್ಥರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ರಾಜು ಅವರನ್ನು ನೇಮಕ ಮಾಡಲಾಗಿದೆ.
ಲೆಫ್ಟಿನೆಂಟ್ ಜನರಲ್ ರಾಜು ಹೆಲಿಕಾಪ್ಟರ್ ಪೈಲಟ್ ಆಗಿದ್ದು, ಪ್ರಸ್ತುತ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಮತ್ತು ಪೂರ್ವ ಲಡಾಖ್‌ನಲ್ಲಿ ಸೇನೆಯ ಒಟ್ಟಾರೆ ಕಾರ್ಯಾಚರಣೆಯ ಸಿದ್ಧತೆಯನ್ನು ನೋಡಿಕೊಳ್ಳುತ್ತಾರೆ.
ರಾಜು ಸೈನಿಕ್ ಸ್ಕೂಲ್ ಬಿಜಾಪುರ ಮತ್ತು ರಾಷ್ಟ್ರೀಯ ರಕ್ಷಣಾ ಅಕಾಡೆಮಿಯ ಹಳೆಯ ವಿದ್ಯಾರ್ಥಿ. ಅವರನ್ನು ಡಿಸೆಂಬರ್ 15, 1984 ರಂದು ಜಾಟ್ ರೆಜಿಮೆಂಟ್‌ಗೆ ಸೇರ್ಪಡೆಯಾಗಿದ್ದರು.