ಮನೆ ರಾಷ್ಟ್ರೀಯ ಉದ್ಯಮಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ: ವ್ಯಕ್ತಿ ಬಂಧನ

ಉದ್ಯಮಿ ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಕರೆ: ವ್ಯಕ್ತಿ ಬಂಧನ

0

ಮುಂಬೈ(Mumbai): ಖ್ಯಾತ ಉದ್ಯಮಿ ಮುಖೇಶ್ ಅಂಬಾನಿ ಅವರ ಕುಟುಂಬಕ್ಕೆ ವ್ಯಕ್ತಿಯೊಬ್ಬ ನಾಲ್ಕು ಬಾರಿ ಜೀವ ಬೆದರಿಕೆ ಕರೆ ಮಾಡಿದ್ದು, ಸದ್ಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಅಫ್ಜಲ್‌ ಎಂದು ಗುರುತಿಸಲಾಗಿದ್ದು, ಈ ವ್ಯಕ್ತಿ ಮಾನಸಿಕವಾಗಿ ಅಸ್ವಸ್ಥ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂಬುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಮುಖೇಶ್ ಅಂಬಾನಿ ನಡೆಸುತ್ತಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಗೆ ಬಂಧಿತ ಆರೋಪಿ ಕರೆ ನೀಡಿ ಜೀವ ಬೆದರಿಕೆ ಹಾಕಿದ್ದ. ದೂರವಾಣಿ ಕರೆಗಳನ್ನು ಟ್ರ್ಯಾಕ್ ಮಾಡಿ ಅಫ್ಜಲ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಫ್ಜಲ್‌ನನ್ನು ಬಂಧಿಸಿರುವ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.

ಹಿಂದಿನ ಲೇಖನಟೆರೇಸ್‌ ಮೇಲೆ‌ ರಾಷ್ಟ್ರ ಧ್ವಜ ಕಟ್ಟುವಾಗ ಆಯತಪ್ಪಿ ಬಿದ್ದು ವ್ಯಕ್ತಿ ಸಾವು
ಮುಂದಿನ ಲೇಖನಮುಂದಿನ ಬಾರಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಬಿಎಸ್‍’ವೈ