ಪೋರ್ಟ್ ಬ್ಲೇರ್: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಇಂದು (ಶನಿವಾರ) ಮುಂಜಾನೆ 7 ಗಂಟೆ ಸುಮಾರಿಗೆ ಲಘು ಭೂಕಂಪ ಸಂಭವಿಸಿದೆ ಎಂದು ವರದಿಯಾಗಿದೆ.
ರಿಕ್ಟರ್ ಮಾಪಕದಲ್ಲಿ 4.4ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ‘ಎಕ್ಸ್’ನಲ್ಲಿ ಮಾಹಿತಿ ಹಂಚಿಕೊಂಡಿದೆ.
ಭೂಕಂಪದ ಕೇಂದ್ರ ಬಿಂದು 11 ಕಿ.ಮೀ ಆಳದಲ್ಲಿ ದಾಖಲಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ತಕ್ಷಣಕ್ಕೆ ಯಾವುದೇ ಪ್ರಾಣ ಹಾನಿ ಅಥವಾ ಆಸ್ತಿ ನಷ್ಟದ ಬಗ್ಗೆ ವರದಿಯಾಗಿಲ್ಲ.