ಮೈಸೂರು: ಮೈಸೂರು ರಾಜವಂಶಸ್ಥರಾಗಿರುವ ಬಿಜೆಪಿ ಅಭ್ಯರ್ಥಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಹಗುರವಾದ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಪಿ. ಮೋಹನ್ ಕಿಡಿಕಾರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮೈಸೂರು ನಗರ ಬಿಜೆಪಿ ವಕ್ತಾರ ಪಿ. ಮೋಹನ್, ನಗರಪಾಲಿಕೆ ಚುನಾವಣೆಯಲ್ಲೂ ಸ್ಪರ್ಧಿಸಿ ಗೆಲ್ಲಲು ಸಾಧ್ಯವಾಗದಂತಹ ಅಭ್ಯರ್ಥಿಗೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಎಂ ಲಕ್ಷ್ಮಣ್ ಹಗುರವಾದ ಹೇಳಿಕೆಗಳನ್ನು ನೀಡಿರುವುದು ಸರಿಯಲ್ಲ. ಯದವೀರ್ ಹಾಗು ಬಿಜೆಪಿ ಬಗ್ಗೆ ಗೌರವದಿಂದ ಮಾತನಾಡಬೇಕು.
ಒಕ್ಕಲಿಗ ಸಮುದಾಯವನ್ನು ಬಿಜೆಪಿ ಎಂದು ಕೂಡ ಕಡೆಗಣಿಸಿಲ್ಲ. ಒಕ್ಕಲಿಗ ಸಮುದಾಯದ ಪ್ರತಾಪ್ ಸಿಂಹಗೆ ಬಿಜೆಪಿ ಹತ್ತು ವರ್ಷಗಳ ಕಾಲ ಅವಕಾಶ ನೀಡಿತ್ತು. ಇದೀಗ ಬೇರೆ ಸಮುದಾಯದವರಿಗೂ ಅವಕಾಶ ಮಾಡಿಕೊಡುವ ಸಲುವಾಗಿ ಬದಲಾವಣೆ ಮಾಡಲಾಗಿದೆ ಎಂದು ಮೋಹನ್ ವಾಗ್ದಾಳಿ ನಡೆಸಿದರು.














