ಮನೆ ದೇಶ ಉಗ್ರ ಸಂಘಟನೆಯೊಂದಿಗೆ ಸಂಪರ್ಕ: ಇಬ್ಬರ ಬಂಧನ

ಉಗ್ರ ಸಂಘಟನೆಯೊಂದಿಗೆ ಸಂಪರ್ಕ: ಇಬ್ಬರ ಬಂಧನ

0

ಗುವಾಹಟಿ (Guwahati): ಉಗ್ರ ಸಂಘಟನೆಯಾದ ಅಲ್–ಕೈದಾ (ಎಕ್ಯೂಐಎಸ್) ಮತ್ತು ಅನ್ಸರುಲ್ಲಾ ಬಾಂಗ್ಲಾ ಟೀಮ್ (ಎಬಿಟಿ) ಜೊತೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ.

ಟಿಂಕುನಿಯಾ ಶಾಂತಿಪುರದ ನಿವಾಸಿ ಇಮಾಮ್ ಅಬ್ದುಸ್ ಸುಭಾನ್ ಮತ್ತು ತಿಲಪಾರಾ ನಾತುನ್ ನಿವಾಸಿ ಇಮಾಮ್ ಜಲಾಲುದ್ದೀನ್ ಶೇಖ್ ಬಂಧಿತ ಆರೋಪಿಗಳು.

ಬಂಧಿತರಿಂದ ಅಲ್-ಕೈದಾ ಸಂಘಟನೆಯೊಂದಿಗೆ ವ್ಯವಹರಿಸಲು ಬಳಸುತ್ತಿದ್ದ ವಸ್ತುಗಳು, ಪೋಸ್ಟರ್‌ಗಳು, ಪುಸ್ತಕಗಳು ಮತ್ತು ಇತರ ದಾಖಲೆಗಳು ಸೇರಿದಂತೆ ಮೊಬೈಲ್ ಫೋನ್‌ಗಳು, ಸಿಮ್ ಕಾರ್ಡ್‌ಗಳು ಮತ್ತು ಐಡಿ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೋಲ್‌ಪಾರಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಕೇಶ್ ರೆಡ್ಡಿ ತಿಳಿಸಿದ್ದಾರೆ.

ಬಂಧಿತ ಆರೋಪಿಗಳು ಬಾಂಗ್ಲಾ ಪ್ರಜೆಗಳಿಗೆ ಆಶ್ರಯ ನೀಡಿದ್ದರು. ಜತೆಗೆ ಬಾಂಗ್ಲಾದಿಂದ ಅಸ್ಸಾಂಗೆ ಬಂದ ಜಿಹಾದಿ ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಸ್ಸಾಂನಲ್ಲಿ ಜುಲೈ 28ರಂದು ವಿವಿಧ ಜಾಗತಿಕ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ 11 ಮಂದಿಯನ್ನು ಬಂಧಿಸಲಾಗಿತ್ತು.