ಬೆಂಗಳೂರು: ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಎಂದು ಆರೋಪಿಸಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಕಾಂಗ್ರೆಸ್ ಪೋಸ್ಟ್ ಹಂಚಿಕೊಂಡು, ಜೆಡಿಎಸ್ ಪಕ್ಷದ ಕೇಂದ್ರ ಹೆಡ್ ಆಫೀಸ್ ನಂತಿರುವ ಬಿಡದಿ ತೋಟದ ಮನೆಯಿಂದ ಮದ್ಯ ಹಾಗೂ ಬಾಡೂಟದ ಘಮಲು ಹೊರಬರುತ್ತಿದೆಯಂತೆ? ಸೋಲಿನ ಭೀತಿಯಿಂದ ಹೊಸದುಡುಕಿನ ಹೆಸರಲ್ಲಿ ಮತದಾರರಿಗೆ, ಕಾರ್ಯಕರ್ತರಿಗೆ ಬಾಡೂಟದ ವ್ಯವಸ್ಥೆ ಮಾಡಿರುವ ಕುರಿತು ಮಾಹಿತಿಗಳಿದ್ದರೂ ಕರ್ನಾಟಕ ಚುನಾವಣಾ ಆಯೋಗವು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕೂತಿರುವುದೇಕೆ? ಎಂದು ಪ್ರಶ್ನಿಸಿದೆ.
ಸೋಲಿನ ಭಯದಲ್ಲಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮದ್ಯ, ಮಾಂಸದ ರುಚಿ ತೋರಿಸಿ ಮತ ಕೇಳಲು ಮುಂದಾಗಿವೆಯೇ?, ರಾಮನಗರ ಅಪರ ಜಿಲ್ಲಾ ಚುನಾವಣಾಧಿಕಾರಿಗಳು ಬಾಡೂಟದ ಆಮಿಷವನ್ನು ತಡೆಯದೇ ವಾಮಮಾರ್ಗದ ಚುನಾವಣೆಗೆ ಬೆಂಬಲ ನೀಡುತ್ತಿದ್ದಾರೆಯೇ? ಎಂದು ಆರೋಪಿಸಿದೆ.
Saval TV on YouTube