ಮನೆ ಸುದ್ದಿ ಜಾಲ ಸೋಮವಾರ ಸಂಜೆ 5 ರಿಂದ ಮದ್ಯ ಮಾರಾಟ ಬಂದ್‌

ಸೋಮವಾರ ಸಂಜೆ 5 ರಿಂದ ಮದ್ಯ ಮಾರಾಟ ಬಂದ್‌

0

ವಿಧಾನಸಭಾ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ನಾಲ್ಕು ದಿನ ಕಾಲ ಮದ್ಯ ಮಾರಾಟ ಬಂದ್‌ ಆಗಲಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಎದುರಾಗಿದೆ. ರಾಜ್ಯದಲ್ಲಿ ಎಲ್ಲ ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ ಮದ್ಯ ಖರೀದಿ ಭರಾಟೆ ಜೋರಾಗಿಯೇ ಇತ್ತು. ಹಲವೆಡೆ ಅಧಿಕ ದರಕ್ಕೆ ಮಾರಾಟವಾಗಿರುವ ವರದಿಗಳೂ ಬಂದಿವೆ. ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಣೆಗೆ ನಿಷೇಧ ಜಾರಿಯಾಗಲಿದೆ. ಅಂತೆಯೇ ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌ ಆಗಲಿದೆ.

Join Our Whatsapp Group

ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮುನ್ನ ಅವಧಿಯಲ್ಲಿಅಂದರೆ, ಮೇ 8 ರ ಸಂಜೆ 5 ರಿಂದ 10ರ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಮಾರಾಟ ಮತ್ತು ಪೂರೈಕೆ ನಿಷೇಧಿಸಲಾಗಿದೆ. ಈ ಕುರಿತು ಆಯಾ ಜಿಲ್ಲಾಧಿಕಾರಿಗಳು ಪ್ರತ್ಯೇಕ ಆದೇಶ ಹೊರಡಿಸಿದ್ದಾರೆ.

ಅದೇ ರೀತಿ, ಮತ ಎಣಿಕೆ ದಿನವೂ ಮದ್ಯ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಮೇ 13ರಂದು ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮದ್ಯದಂಗಡಿಗಳು ಬಂದ್‌ ಆಗಲಿವೆ. ನಾಲ್ಕು ದಿನಗಳ ಅವಧಿಯಲ್ಲಿ ಮದ್ಯ ದಾಸ್ತಾನು ಮಾಡುವುದಕ್ಕೆ ಕಡಿವಾಣ ಹಾಕಬೇಕು. ಈ ಕುರಿತಂತೆ ಸಮಗ್ರ ನಿರ್ದೇಶನಗಳನ್ನು ನೀಡಬೇಕು ಎಂದು ಆಯೋಗವು ರಾಜ್ಯ ಸರಕಾರಕ್ಕೆ ಬರೆದು ಸೂಚನೆ ನೀಡಿತ್ತು.