ಮನೆ ರಾಜ್ಯ ನಾಳೆಯಿಂದ ಜೂನ್ 6ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

ನಾಳೆಯಿಂದ ಜೂನ್ 6ರ ವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್

0

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಮತ್ತು ಲೋಕಸಭೆ ಚುನಾವಣೆಯ ಮತ ಎಣಿಕೆಯ ದೃಷ್ಟಿಯಿಂದ ಕರ್ನಾಟಕದಾದ್ಯಂತ ಜೂನ್ 1ರಿಂದ ಐದು ದಿನಗಳ ಕಾಲ ಮದ್ಯ ಮಾರಾಟ ಭಾಗಶಃ ಬಂದ್ ಆಗಲಿದೆ.

Join Our Whatsapp Group

ಜೂನ್ 2, 4 ಮತ್ತು 6 ರಂದು ಮದ್ಯ ಮಾರಾಟ ಸಂಪೂರ್ಣ ಸ್ಥಗಿತವಾಗಿರಲಿದೆ. ಜೂನ್ 1 ಮತ್ತು ಜೂನ್ 3 ರಂದು ಭಾಗಶಃ ಮದ್ಯ ಮಾರಾಟಕ್ಕೆ  ಅವಕಾಶ ನೀಡಲಾಗುತ್ತದೆ. ಈ ಕ್ರಮ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಏಪ್ರಿಲ್ 24 ರಿಂದ 26 ರವರೆಗೆ ಮದ್ಯ ಮಾರಾಟ ನಿಷೇಧ ಹೇರಲಾಗಿತ್ತು. ಇದೀಗ ಮತ್ತೆ ಮದ್ಯ ಮಾರಾಟ ನಿಷೇಧದಿಂದ ವಹಿವಾಟಿಗೆ ದೊಡ್ಡ ಹೊಡೆತ ಬೀಳಲಿದೆ ಎಂದು ಬೆಂಗಳೂರಿನ ಮದ್ಯ ಮಾರಾಟಗಾರರು ಆತಂಕ ವ್ಯಕ್ತಪಡಿಸಿದ್ದಾರೆ.

ನಾವು ಕಾರ್ಪೊರೇಟ್ ಪಾರ್ಟಿಗಳು ಮತ್ತು ಇತರ ಕಾರ್ಯಕ್ರಮಗಳನ್ನು ಆಯೋಜಿಸುವ ಶನಿವಾರ ಸಂಜೆಯೇ ಮದ್ಯ ಮಾರಾಟದ ಮೇಲಿನ ನಿಷೇಧವು ಪ್ರಾರಂಭವಾಗುತ್ತದೆ. ಇದರಿಂದ ದಿನಕ್ಕೆ 30 ಲಕ್ಷ ರೂ.ಗೂ ಅಧಿಕ ನಷ್ಟ ಉಂಟಾಗಲಿದೆ ಎನ್ನಲಾಗಿದೆ.

ಆಹಾರ ಪೂರೈಸಲು ಪಬ್‌ಗಳು ಮತ್ತು ರೆಸ್ಟೋಬಾರ್‌ಗಳಿಗೆ ಅವಕಾಶ ನೀಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿರುವುದಾಗಿ ಭಾರತೀಯ ರಾಷ್ಟ್ರೀಯ ರೆಸ್ಟೋರೆಂಟ್‌ಗಳ ಸಂಘದ (ಎನ್‌ಆರ್‌ಎಐ) ಪ್ರತಿನಿಧಿಗಳು ತಿಳಿಸಿದ್ದಾರೆ. ಆದರೆ, ಈ ಬಗ್ಗೆ ಅಧಿಕಾರಿಗಳು ಇನ್ನೂ ನಿರ್ಧಾರ ಕೈಗೊಂಡಿಲ್ಲ. ಈ ಸಂಬಂಧ ಅವರು ನ್ಯಾಯಾಲಯದ ಮೊರೆ ಹೋಗಿದ್ದಾರೆ.

ಜೂನ್ 4 ರಂದು ಮತ ಎಣಿಕೆ ಮುಗಿದ ನಂತರ (ಮುಂಬಯಿ ಮಾದರಿಯಲ್ಲಿ) ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಮತ್ತು ಸಂಸ್ಥೆಗಳಿಗೆ ನಿರ್ಬಂಧಗಳನ್ನು ಮಿತಿಗೊಳಿಸುವಂತೆ ಸಂಘವು ಅಬಕಾರಿ ಆಯುಕ್ತರಿಗೆ ಪತ್ರ ಬರೆದಿದೆ ಎಂದು ಬೃಹತ್ ಬೆಂಗಳೂರು ಹೊಟೇಲ್ ಮಾಲೀಕರ ಸಂಘದ (ಬಿಬಿಎಚ್‌ಎ) ಅಧ್ಯಕ್ಷ ಪಿಸಿ ರಾವ್ ತಿಳಿಸಿದ್ದಾರೆ.

ಮದ್ಯ ಮಾರಾಟ ಬಂದ್ ಎಂದು?

ಜೂನ್ 1 ರಂದು ಸಂಜೆ 4 ರಿಂದ ಜೂನ್ 3 ರ ಸಂಜೆ 4 ರವರೆಗೆ ವಿಧಾನ ಪರಿಷತ್ ಚುನಾವಣೆಯ ಕಾರಣ ಮದ್ಯ ಮಾರಾಟಕ್ಕೆ ನಿಷೇಧ.

ಜೂನ್ 1 ರಂದು ಸಂಜೆ 4 ರ ಒಳಗೆ ಮತ್ತು ಜೂನ್ 3 ರ ಸಂಜೆ 4 ರ ನಂತರ ಮದ್ಯ ಮಾರಾಟಕ್ಕೆ ಅವಕಾಶವಿದೆ.

ಲೋಕಸಭೆ ಚುನಾವಣೆಯ ಮತ ಎಣಿಕೆಯ ಕಾರಣ ಜೂನ್ 3 ರ ಮಧ್ಯರಾತ್ರಿಯಿಂದ ಜೂನ್ 4 ರ ಮಧ್ಯರಾತ್ರಿಯವರೆಗೆ ಮದ್ಯ ಮಾರಾಟಕ್ಕೆ ನಿಷೇಧ.

ಜೂನ್ 6 ರಂದು ಬೆಳಿಗ್ಗೆ 6 ರಿಂದ ಮಧ್ಯರಾತ್ರಿಯವರೆಗೆ ಎಂಎಲ್‌ಸಿ ಚುನಾವಣೆಯ ಮತ ಎಣಿಕೆಯ ಕಾರಣ ಮದ್ಯ ಮಾರಾಟ ಬಂದ್.

ಹಿಂದಿನ ಲೇಖನಪಾದಯಾತ್ರಿಕರ ಮೇಲೆ ಹರಿದ ಲಾರಿ: ಓರ್ವ ಸಾವು, ಇನ್ನೋರ್ವನ ಸ್ಥಿತಿ ಗಂಭೀರ
ಮುಂದಿನ ಲೇಖನವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಶಾಸಕ ಸಿದ್ದು ಪಾಟೀಲರ ಇಬ್ಬರು ಸಹೋದರರ ಮೇಲೆ ಪ್ರಕರಣ ದಾಖಲು