ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1, ಶನಿವಾರ (ಇಂದು) ಬಜೆಟ್ ಮಂಡಿಸುತ್ತಿದ್ದಾರೆ. ಇದು ಅವರ ಸತತ ಎಂಟನೇ ಬಜೆಟ್ ಮಂಡನೆ ಆಗಿದ್ದು, ಈ ಬಜೆಟ್ ನಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.
ಉದ್ಯಮ ಕ್ಷೇತ್ರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರನ್ನು ಉತ್ತೇಜಿಸುವ ಸಲುವಾಗಿ ಹೊಸ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.
ಮುಂದಿನ ಐದು ವರ್ಷಗಳಲ್ಲಿ 5 ಲಕ್ಷ ಮಹಿಳಾ ಉದ್ಯಮಿಗಳಿಗೆ 2 ಕೋಟಿ ರೂ ವರೆಗಿನ ಅವಧಿ ಸಾಲವನ್ನು ನೀಡಲು ಸರ್ಕಾರವು ಯೋಜಿಸಿದ್ದು, ಇದು ಮಹಿಳಾ ಉದ್ದಿಮೆದಾರರಿಗೆ ಅನುಕೂಲವಾಗಲಿದೆ.
ಈ ಯೋಜನೆಯು ಎಸ್ ಸಿ/ಎಸ್ ಟಿ ಹಾಗೂ ಮಹಿಳಾ ಉದ್ಯಮಿಗಳು ಹೊಸ ವ್ಯವಹಾರಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯ, ಸಬ್ಸಿಡಿಗಳು ಮತ್ತು ಮಾರ್ಕೆಟಿಂಗ್ ನೆರವು ಸೇರಿದಂತೆ ವಿವಿಧ ಪ್ರಯೋಜನಗಳನ್ನು ಇದು ಒದಗಿಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Saval TV on YouTube