ಮನೆ ರಾಜ್ಯ ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22 ರಂದು ಅರ್ಜಿ ಸಲ್ಲಿಕೆ; ಸಿಎಂ ಬಸವರಾಜ...

ಸ್ಥಳೀಯ ಸಂಸ್ಥೆಗಳ ಚುನಾವಣೆ: ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22 ರಂದು ಅರ್ಜಿ ಸಲ್ಲಿಕೆ; ಸಿಎಂ ಬಸವರಾಜ ಬೊಮ್ಮಾಯಿ

0

ಮೈಸೂರು (Mysuru): ತಾಲ್ಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಹಾಗೂ ಬಿಬಿಎಂಪಿ ಚುನಾವಣೆ ಕುರಿತು ಕ್ಷೇತ್ರಗಳ ಪುನರ್ ವಿಂಗಡಣೆ ಮತ್ತು ಮೀಸಲಾತಿ ಆಯೋಗ ತನ್ನ ವರದಿ ನೀಡಿದ ಕೂಡಲೇ ಸರ್ವೋಚ್ಚ ನ್ಯಾಯಾಲಯದಲ್ಲಿ ಜುಲೈ 22 ರಂದು ಅರ್ಜಿ ಸಲ್ಲಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ನಿರ್ದೇಶನದ ಅನುಗುಣವಾಗಿ ಚುನಾವಣಾ ಪ್ರಕ್ರಿಯೆ ನಡೆಸಲಾಗುವುದು ಎಂದರು.
ಆಷಾಢ ಮಾಸದಲ್ಲಿ ಕೆ.ಆರ್.ಎಸ್, ಕಬಿನಿ ಎರಡೂ ತುಂಬಿರುವುದು ಬಹಳ ಅಪರೂಪ. ಮಳೆ ಎಲ್ಲೆಡೆ ಉತ್ತಮವಾಗಿ ಆಗಿದ್ದು, ರೈತರು ತಮ್ಮ ಹೊಲ ಗದ್ದೆಗಳಲ್ಲಿ ಕೆಲಸ ಮಾಡಲು ಅನುಕೂಲವಾಗಿದೆ ಎಂದರು.