ಮನೆ ರಾಜ್ಯ ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ

ಲೋಕಸಭಾ ಚುನಾವಣೆ: ರಾಜ್ಯದಲ್ಲಿ 2ನೇ ಹಂತದ ಮತದಾನ ಆರಂಭ

0

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದ ೧೪ ಕ್ಷೇತ್ರಗಳಿಗೆ ಇಂದು ಎರಡನೇ ಹಂತದ ಮತದಾನ ಆರಂಭಗೊಂಡಿದೆ, ಬೆಳಿಗ್ಗೆ ಏಳು ಗಂಟೆಗೆ ಮತದಾನ ಪ್ರಕ್ರಿಯೆ ಆರಂಭಗೊಂಡಿದ್ದು ಮತದಾರರು ಬಿರುಸಿನಲ್ಲಿ ಮತದಾನ ಮಾಡುತ್ತಿದ್ದಾರೆ.

Join Our Whatsapp Group

ಮತದಾರರನ್ನು ಮತಗಟ್ಟೆ ಕೇಂದ್ರಗಳತ್ತ ಆಕರ್ಷಿಸಲು ವಿಶಿಷ್ಟ ಯೋಜನೆಯನ್ನು ಹಮ್ಮಿಕೊಂಡಿರುವ ಆಯಾ ಜಿಲ್ಲಾಡಳಿತ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸುವ ಮೂಲಕ ಸ್ಥಳೀಯ ಸಂಸ್ಕೃತಿ, ಆಚರಣೆ, ಇತಿಹಾಸಗಳನ್ನು ಬಿಂಬಿಸುವ ಪ್ರಯತ್ನವನ್ನೂ ಮಾಡಿಕೊಂಡಿವೆ.

ಬೆಳಿಗ್ಗೆ ಏಳು ಗಂಟೆಗೆ ಆರಂಭವಾದ ಮತದಾನ ಸಂಜೆ ಆರು ಗಂಟೆಯವರೆಗೆ ನಡೆಯಲಿದೆ, ಅಹಿತಕರ ಘಟನೆಗಳು ನಡೆಯದಂತೆ ಮತಗಟ್ಟೆಗಳಲ್ಲಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಲಾಗಿದೆ.

ಇಂದು ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಒಟ್ಟು 2.59 ಕೋಟಿ ಮತದಾರರು ಮತದಾನ ಮಾಡಲಿದ್ದು ಒಟ್ಟು 227 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ.

ದಾವಣಗೆರೆ, ವಿಜಯಪುರ, ಗಂಗಾವತಿ, ಕುಂದಾಪುರ, ಸೇರಿದಂತೆ ಬೆಳಿಗ್ಗೆಯಿಂದಲೇ ಬಿರುಸಿನ ಮತದಾನ ನಡೆಯುತ್ತಿದೆ ಕೆಲವೆಡೆ ಮತಯಂತ್ರ ಕೈಕೊಟ್ಟ ಪರಿಣಾಮ ಮತದಾರರು ಪರದಾಡುವಂತಾಯಿತು.

ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಹರಿಹರ ತಾಲ್ಲೂಕಿನ ಹನಗವಾಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮೊದಲ ಮತವನ್ನು ಚಲಾಯಿಸಿದರು.

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮತದಾನ ವೀಕ್ಷಣೆಗೆ ವೆಬ್ ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಣಕು ಮತದಾನ ಪ್ರಕ್ರಿಯೆ ನಂತರ ಮತದಾನ ಎಲ್ಲಾ ಕಡೆ ಆರಂಭವಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ್ ತಿಳಿಸಿದ್ದಾರೆ.

ತಾಲೂಕಿನ ಆನೆಗುಂದಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಆನೆಗೊಂದಿ ರಾಜವಂಶಸ್ಥರಾದ ಶ್ರೀಮತಿ ಲಲಿತಾರಾಣಿ ಶ್ರೀರಂಗದೇವರಾಯಲು ತಮ್ಮ ಆಪ್ತರ ಜತೆ ತೆರಳಿ ಮತ ಚಲಾಯಿಸಿದರು..

ಮತಯಂತ್ರದಲ್ಲಿ ದೋಷ, ಆರಂಭವಾಗದ ಮತದಾನ:

ಪರಿಶಿಷ್ಟ ಜಾತಿಗೆ ಮೀಸಲಿರುವ ವಿಜಯಪುರ ಲೋಕಸಭಾ ಚುನಾವಣೆಗೆ ಮತ ಯಂತ್ರದ ತಾಂತ್ರಿಕ ದೋಷದಿಂದ ವಿಜಯಪುರ ನಗರದ ಮತಗಟ್ಟೆಯೊಂದರಲ್ಲಿ ಇನ್ನು ಆರಂಭವಾಗಿಲ್ಲ. ಇದೆ ರೀತಿ ಕೆಲವು ಕಡೆಗಳಲ್ಲಿ ಮತಯಂತ್ರದಲ್ಲಿ ಕಂಡುಬಂದ ದೋಷದಿಂದಾದಿ ಮತದಾರರು ಮತಗಟ್ಟೆಯಲ್ಲಿ ಕಾದುಕುಳಿತ ಪ್ರಸಂಗ ನಡೆಯಿತು.

ಹಿಂದಿನ ಲೇಖನರೇವತಿ
ಮುಂದಿನ ಲೇಖನಮತದಾನದ ಬಳಿಕ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಮನವಿ