ಮನೆ ರಾಜ್ಯ ಲೋಕಸಭಾ ಚುನಾವಣೆ: ದಾವಣಗೆರೆ, ರಾಯಚೂರಿನಲ್ಲಿ ಕಾಂಗ್ರೆಸ್ ಮುನ್ನಡೆ

ಲೋಕಸಭಾ ಚುನಾವಣೆ: ದಾವಣಗೆರೆ, ರಾಯಚೂರಿನಲ್ಲಿ ಕಾಂಗ್ರೆಸ್ ಮುನ್ನಡೆ

0

ಬೆಂಗಳೂರು: ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು 39,503 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ 38,418 ಮತಗಳನ್ನು ಪಡೆದಿದ್ದು, ಬೊಮ್ಮಾಯಿ 1,085 ಮತಗಳ ಮುನ್ನಡೆ ಪಡೆದಿದ್ದಾರೆ.

Join Our Whatsapp Group

ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಸುತ್ತಿನ ಮುಕ್ತಾಯಕ್ಕೆ ಕಾಂಗ್ರೆಸ್ ನ ಡಾ. ಪ್ರಭಾ ಮಲ್ಲಿಕಾರ್ಜುನ 6318 ಮತಗಳ ಮುನ್ನಡೆ ಸಾಧಿಸಿದ್ದಾರೆ. ಡಾ. ಪ್ರಭಾ ಮಲ್ಲಿಕಾರ್ಜುನ 32, 544, ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ 26, 226 ಹಾಗೂ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ 3312 ಮತಗಳ ಪಡೆದಿದ್ದಾರೆ.

ಮೊದಲ ಸುತ್ತಿನಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ 2744 ಮತಗಳ ಅಂತರದಿಂದ ಮುಂದಿದ್ದರು. ಡಾ. ಪ್ರಭಾ ಮಲ್ಲಿಕಾರ್ಜುನ 38,640 ಬಿಜೆಪಿಯ ಗಾಯಿತ್ರಿ ಸಿದ್ದೇಶ್ವರ 35896 ಮತ ಗಳಿಸಿದ್ದಾರೆ.

ರಾಯಚೂರು ಕ್ಷೇತ್ರದಲ್ಲಿ 415 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಜಿ.ಕುಮಾರ ನಾಯಕ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ರಾಜಾ ಅಮರೇಶ್ವರ ನಾಯಕಗೆ 3429 ಮತಗಳು, ಕಾಂಗ್ರೆಸ್ ನ ಜಿ.ಕುಮಾರ ನಾಯಕಗೆ 3844 ಮತಗಳು ಬಂದಿವೆ.

ಬೆಳಗಾವಿಯಲ್ಲಿ ಮೂರನೇ ಸುತ್ತಿನ ಮತ ಎಣಿಕೆ ಮುಕ್ತಾಯದ ವೇಳೆ ಬಿಜೆಪಿಯ ಜಗದೀಶ್ ಶೆಟ್ಟರ್ 119000 ಮತಗಳು, ಕಾಂಗ್ರೆಸ್ ನ ಮೃಣಾಲ್‌ ಹೆಬ್ಬಾಳ್ ಕಾರ್ 89514 ಮತ ಪಡೆದಿದ್ದಾರೆ. ಜಗದೀಶ್ ಶೆಟ್ಟರ್ 29,486 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಹಿಂದಿನ ಲೇಖನಮೈಸೂರು ಕೊಡಗು ಕ್ಷೇತ್ರದಲ್ಲಿ ಯದುವೀರ್, ಶಿವಮೊಗ್ಗದಲ್ಲಿ ಬಿ ವೈ ರಾಘವೇಂದ್ರ ಮುನ್ನಡೆ
ಮುಂದಿನ ಲೇಖನಜಗನ್ ಗೆ ಭಾರಿ ಹಿನ್ನಡೆ; ಚಂದ್ರಬಾಬು ನಾಯ್ಡು ಅವರ ಟಿಡಿಪಿಯ ಪ್ರಬಲ ಪ್ರದರ್ಶನ