ಮನೆ ರಾಷ್ಟ್ರೀಯ ಲೋಕಸಭೆ ಚುನಾವಣೆ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಲೋಕಸಭೆ ಚುನಾವಣೆ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

0

ನವದೆಹಲಿ: ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಯ್ಕೆಮಾಡಲಾಗಿದೆ.  ಶನಿವಾರ ನಡೆದ ಇಂಡಿಯಾ ಮೈತ್ರಿಕೂಟದ ವರ್ಚುವಲ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಾಸ್ತವವಾಗಿ, ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ರಚಿಸಲಾದ 26 ಪಕ್ಷಗಳ ಮೈತ್ರಿಕೂಟದ ಮಹತ್ವದ ಸಭೆ ಶನಿವಾರ ನಡೆಯಿತು. ಈ ವರ್ಚುವಲ್ ಸಭೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎನ್‌ ಸಿಪಿ ಮುಖ್ಯಸ್ಥ ಶರದ್ ಪವಾರ್, ಸೀತಾರಾಂ ಯೆಚೂರಿ, ಡಿಎಂಕೆ ನಾಯಕ ಸ್ಟಾಲಿನ್ ಸೇರಿದಂತೆ 14 ಪಕ್ಷಗಳ ನಾಯಕರು ಭಾಗವಹಿಸಿದ್ದರು.

ಮಮತಾ ಬ್ಯಾನರ್ಜಿ ಮತ್ತು ಉದ್ಧವ್ ಠಾಕ್ರೆ ಸಭೆಗೆ ಹಾಜರಾಗಿರಲಿಲ್ಲ. ಸಭೆ ಮುಗಿದ ಬಳಿಕ ಬಿಹಾರ ಸಚಿವ ಸಂಜಯ್ ಝಾ ಈ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಲಾಗಿದೆ.

ಇದೇ ವೇಳೆ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಅವರು ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿದರು. ಇಂಡಿಯಾ ಮೈತ್ರಿಕೂಟದ ಸಭೆಗೂ ಮುನ್ನ ಮುಕುಲ್ ವಾಸ್ನಿಕ್ ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಅವರನ್ನು ಭೇಟಿ ಮಾಡಿದ್ದರು.

ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ಮುಕುಲ್ ವಾಸ್ನಿಕ್ ಕೂಡ ಉಪಸ್ಥಿತರಿದ್ದರು. ಅವರು ಕಾಂಗ್ರೆಸ್‌ನ ರಾಷ್ಟ್ರೀಯ ಮೈತ್ರಿ ಸಮಿತಿಯ ಸಂಚಾಲಕರಾಗಿದ್ದಾರೆ. ಇದೀಗ ನಿತೀಶ್​ ಕುಮಾರ್​ಗೆ ಇಂಡಿಯಾ ಮೈತ್ರಿಕೂಡದಲ್ಲಿ ಪ್ರಮುಖ ಜವಾಬ್ದಾರಿ ನೀಡುವ ಕುರಿತು ಚರ್ಚೆ ನಡೆದಿದೆ.

ಐಎನ್‌ ಡಿಐಎ ಮೈತ್ರಿಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ಅಂತಿಮಗೊಂಡಿಲ್ಲ. ಸೀಟು ಹಂಚಿಕೆ ಸವಾಲಾಗಿರುವಾಗ ಸಂಚಾಲಕರಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ನಿತೀಶ್‌ಕುಮಾರ್ ಹೇಳಿ ಸಂಚಾಲಕರ ಹುದ್ದೆಯನ್ನು ನಿರಾಕರಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂಡಿಯಾ ಮೈತ್ರಿಕೂಟದ ಮಿತ್ರಪಕ್ಷಗಳು ಆದಷ್ಟು ಶೀಘ್ರ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಜೊತೆಯಾಗಿ ಚುನಾವಣಾ ರ್‍ಯಾಲಿ ನಡೆಸುವುದು ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಸಾಧ್ಯವಾಗಲಿದೆ ಎನ್ನುವ ಒಲವು ವ್ಯಕ್ತಪಡಿಸಲಾಗಿದೆ.

ಹಿಂದಿನ ಲೇಖನನಾವು ವಚನ ಭ್ರಷ್ಟರಲ್ಲ, ವಚನ ಪಾಲಕರು: ಪಂಚ ಗ್ಯಾರಂಟಿ ಜಾರಿ ಕುರಿತು ಸಿಎಂ ಸಿದ್ದರಾಮಯ್ಯ
ಮುಂದಿನ ಲೇಖನರಾಷ್ಟ್ರಪತಿ ದ್ರೌಪದಿ ಮುರ್ಮು ಅಯೋಧ್ಯೆಯ ರಾಮ ಮಂದಿರದ ಉದ್ಘಾಟನೆ ನೆರವೇರಿಸಬೇಕು: ಉದ್ಧವ್ ಠಾಕ್ರೆ