ಮನೆ ಸ್ಥಳೀಯ ಲೋಕಸಭೆ ಚುನಾವಣೆ: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್

ಲೋಕಸಭೆ ಚುನಾವಣೆ: ಏಪ್ರಿಲ್ 26ಕ್ಕೆ ಮೈಸೂರಿನ ಪ್ರವಾಸಿ ತಾಣಗಳು ಬಂದ್

0

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 26 ರಂದು ಮೈಸೂರಿನ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

Join Our Whatsapp Group

ಮತದಾನದ ದಿನ ಶುಕ್ರವಾರವಾಗಿದ್ದರಿಂದ ಅಂದು ರಜೆ ಇದೆ. ಶನಿವಾರ, ಭಾನುವಾರ ಹೇಗೂ ರಜೆಯಾದ್ದರಿಂದ ಮತದಾರರು ಪ್ರವಾಸಕ್ಕೆ ಯೋಜನೆ ಹಾಕಿಕೊಂಡು ತೆರಳಿದರೆ ಮತದಾನದ ಪ್ರಮಾಣ ಕಡಿಮಯಾಗಲಿದೆ ಎಂಬ ಲೆಕ್ಕಾಚಾರದೊಂದಿಗೆ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾಗಿದ್ದಾರೆ.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೈಸೂರು ಮೃಗಾಲಯ, ಕಾರಂಜಿ ಕೆರೆ ಸೇರಿದಂತೆ ಇತರ ಪ್ರವಾಸಿ ತಾಣಗಳನ್ನು ಮುಚ್ಚಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮೈಸೂರು ಮೃಗಾಲಯ ಎಂದೇ ಜನಪ್ರಿಯವಾಗಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಕಾರಂಜಿ ಕೆರೆಯನ್ನು ಏಪ್ರಿಲ್ 26 ರಂದು ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರಿನ ಆತಿಥ್ಯ ಕ್ಷೇತ್ರದ ಉದ್ದಿಮೆಗಳೂ ಮತದಾನಕ್ಕೆ ಉತ್ತೇಜನ ನೀಡುವ ಕ್ರಮಗಳನ್ನು ಕೈಗೊಂಡಿವೆ. ಮತದಾನ ಮಾಡಿ ಭೇಟಿ ನೀಡುವ ಮತದಾರರಿಗೆ ರಿಯಾಯಿತಿಗಳು ಮತ್ತು ವಿಶೇಷ ಪ್ಯಾಕೇಜ್‌ ಗಳನ್ನು ನೀಡುವುದಾಗಿ ಮೈಸೂರಿನ ಹೋಟೆಲ್‌ ಗಳು ಮತ್ತು ರೆಸ್ಟೋರೆಂಟ್‌ ಗಳು ಘೋಷಿಸಿವೆ.

ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಏಪ್ರಿಲ್ 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್​​ಗೆ ಅವಕಾಶ ನೀಡದಂತೆ ಚಿಕ್ಕಮಗಳೂರು ಜಿಲ್ಲಾಡಳಿತ ಕೂಡ ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಸೂಚನೆ ನೀಡಿತ್ತು.