ಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸೋಮವಾರ ಬೆಳಂಬೆಳ್ಳಗ್ಗೆ ಲೋಕಾಯುಕ್ತ ಪೊಲೀಸರು ಅಧಿಕಾರಿಗಳ ಮನೆ ಮತ್ತು ಕಚೇರಿ ಸೇರಿ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ್ದಾರೆ.
ಬೀದರ ಸಣ್ಣ ನೀರಾವರಿ ಇಲಾಖೆ ಕಾರ್ಯ ನಿರ್ವಾಹಕ ಅಭಿಯಂತರ ಸುರೇಶ ಮೇದಾ ಮತ್ತು ಬಸವಕಲ್ಯಾಣ ತಾಲೂಕಿನ ಮುಡುಬಿ ಉಪ ತಹಶಿಲ್ದಾರ ವಿಜಯಕುಮಾರ್ ಸ್ವಾಮಿ ಲೋಕಾಯುಕ್ತ ದಾಳಿಗೆ ಒಳಗಾದ ಅಧಿಕಾರಿಗಳು.
ಸುರೇಶ್ ಮೇದಾ ಅವರ ಬೀದರ್ ನ ಗುರುನಗರದ ನಿವಾಸ ಹಾಗೂ ನೌಬಾದ್’ನಲ್ಲಿರುವ ಕಚೇರಿ ಮೇಲೆ ಹಾಗೂ ಬೀದರ್’ನ ಆನಂದ ನಗರ, ಬಸವಕಲ್ಯಾಣದ ನಿವಾಸ, ಮುಡಬಿ ಪಟ್ಟಣದ ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ.
ಲೋಕಾಯುಕ್ತ ಎಸ್.ಪಿ ಎ.ಆರ್ ಕರ್ಲೂನ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಎನ್. ಎಂ ಓಲೇಕಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.