ಮಂಡ್ಯ: ಇಬ್ಬರು ಅಧಿಕಾರಿಗಳ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಕೊಳಚೆ ನಿರ್ಮೂಲನೆ ಮಂಡಳಿ ಎಕ್ಸಿಕ್ಯೂಟಿವ್ ಇಂಜಿನಿಯರ್ ಬಾಲರಾಜ ಎಂಬುವವರ ಮಳವಳ್ಳಿ ತಾಲೂಕಿನ ನಂಜೇಗೌಡನದೊಡ್ಡಿ ಗ್ರಾಮದ ಫಾರ್ಮ್ ಹೌಸ್ ಮೇಲೆ ದಾಳಿ ನಡೆಸಲಾಗಿದೆ.
ಅತ್ತ ಕೆಐಎಡಿಬಿಯ ನಗರಾಭಿವೃದ್ಧಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಶಶಿಕುಮಾರ್ ಅವರ ಮದ್ದೂರು ತಾಲೂಕಿನ ತೈಲೂರು ಗ್ರಾಮದ ಮನೆ ಮೇಲೂ ದಾಳಿ ನಡೆಸಲಾಗಿದೆ.
ಇಬ್ಬರು ಅಧಿಕಾರಿಗಳು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಮಂಡ್ಯ ಲೋಕಾಯುಕ್ತ ಎಸ್ ಪಿ ಸಜೀತ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.