ಬಳ್ಳಾರಿ: ಜಿಲ್ಲೆಯ ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರ ಮನೆ ಮೇಲೆ ಬುಧವಾರ ಲೋಕಾಯುಕ್ತ ದಾಳಿ ನಡೆಸಲಾಗಿದೆ.
ಕೃಷ್ಣದೇವರಾಯ ವಿವಿ ವ್ಯಾಪ್ತಿಯಲ್ಲಿ ಬರುವ ಸ್ನಾತಕೋತ್ತರ ಕೇಂದ್ರದ ಡಾ. ರವಿ ಮನೆ ಮತ್ತು ಕಚೇರಿ ಮೇಲೆ ಬಳ್ಳಾರಿ ಲೋಕಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಳ್ಳಾರಿಯ ಗಾಂಧಿನಗರದಲ್ಲಿರುವ ಮನೆ, ದಾವಣಗೆರೆ ಮನೆ, ಮತ್ತು ಸಂಡೂರಿನ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿರುವ ಕಚೇರಿಯಲ್ಲಿ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ.
ಬಳ್ಳಾರಿ ಲೋಕಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.