ಮನೆ ಅಪರಾಧ ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

0

ದಾವಣಗೆರೆ: ಭೂ ಸ್ವಾಧೀನದ ಪರಿಹಾರ ನೀಡಲು ಲಂಚ ಸ್ವೀಕರಿಸುತ್ತಿದ್ದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ದಾವಣಗೆರೆ ವಲಯ ಕಚೇರಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ.

ವಿಶೇಷ ಭೂ ಸ್ವಾಧೀನಾಧಿಕಾರಿ, ಹಿರಿಯ ಕೆಎಎಸ್ ಅಧಿಕಾರಿ ಜಿ.ಡಿ. ಶೇಖರ್ ಮತ್ತು ಶಿರಸ್ತೇದಾರ್ ವಿ.ಎ. ಶ್ರೀನಿವಾಸ್ ಲೋಕಾಯುಕ್ತರ ಬಲೆಗೆ ಬಿದ್ದವರು.

ಜಿಲ್ಲಾಡಳಿತ ಭವನದಲ್ಲಿರುವ ಕಚೇರಿಯಲ್ಲೇ ಹಾವೇರಿ ತಾಲೂಕಿನ ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಎಂಬುವರಿಂದ ೩೦ ಸಾವಿರ ರೂಪಾಯಿ ಲಂಚ ಪಡೆದ ಸಂದರ್ಭದಲ್ಲಿ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.

ಸರ್ಕಾರದ ಯೋಜನೆಗೆಂದು ಕೋಳೂರ ಗ್ರಾಮದ ಸಂತೋಷ್ ಗುಡ್ಡಪ್ಪನವರ್ ಭೂಮಿ ಸ್ವಾಧೀನಪಡಿಸಿಕೊಳ್ಳಲಾಗಿದ್ದು, ಪರಿಹಾರಕ್ಕೆ ಇಬ್ಬರು ೩೦ ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.ಈ ಬಗ್ಗೆ ಸಂತೋಷ್ ಗುಡ್ಡಪ್ಪನವರ್ ಲೋಕಾಯುಕ್ತರಿಗೆ ದೂರು ಸಲ್ಲಿಸಿದ್ದರು.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್ .ಕೌಲಾಪುರೆ ನೇತೃತ್ವದಲ್ಲಿ ಡಿವೈಎಸ್ಪಿ ಕೆ.ಜಿ. ರಾಮಕೃಷ್ಣ, ಇನ್ಸ್‌ಪೆಕ್ಟರ್ ಎಚ್.ಎಸ್. ರಾಷ್ಟ್ರಪತಿ, ಎನ್.ಎಚ್. ಆಂಜನೇಯ ಅವರನ್ನೊಳಗೊಂಡ ತಂಡ ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಲೆಗೆ ಬೀಳಿಸುವಲ್ಲಿ ಯಶಸ್ವಿಯಾಗಿದ್ದಾರೆ.