ಮನೆ ರಾಜ್ಯ ಮುಡಾ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ನೀಡಿದ ಲೋಕಾಯುಕ್ತ

ಮುಡಾ ಕೇಸ್‌ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌ ನೀಡಿದ ಲೋಕಾಯುಕ್ತ

0

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಮುಡಾ(MUDA) ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಲೋಕಾಯುಕ್ತ ವರದಿಯಲ್ಲಿ ಕ್ಲೀನ್‌ ಚಿಟ್‌ ನೀಡಿರುವುದಾಗಿ ವರದಿ ತಿಳಿಸಿದೆ.

Join Our Whatsapp Group


ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಭೂ ಹಗರಣದ ತನಿಖೆ ಮುಕ್ತಾಯವಾಗಿದ್ದು, ಮೈಸೂರು ಲೋಕಾಯುಕ್ತರು ನ್ಯಾಯಾಲಯಕ್ಕೆ ವರದಿ ಸಲ್ಲಿಸಲು ಸಜ್ಜಾಗಿದೆ.
ಆದರೆ ತನಿಖಾ ವರದಿಯಲ್ಲಿ ಸಿದ್ದರಾಮಯ್ಯ ಹಾಗೂ ಇತರ ಆರೋಪಿಗಳಿಗೆ ಕ್ಲೀನ್‌ ಚಿಟ್‌ ನೀಡಲಾಗಿದೆ. ಈ ಬಗ್ಗೆ ಲೋಕಾಯುಕ್ತವು ದೂರುದಾರ ಸ್ನೇಹಮಯಿ ಕೃಷ್ಣಗೆ ನೋಟಿಸ್‌ ನೀಡಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ತಿಳಿಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಬಿ ರಿಪೋರ್ಟ್‌ ಸಲ್ಲಿಸುವುದಾಗಿ ಮಾಹಿತಿ ನೀಡಿದೆ.

ಇದೀಗ ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪನ್ನು ಎಸಗಿಲ್ಲ ಎಂಬುದು ಸ್ಪಷ್ಟವಾದಂತಾಗಿದೆ. ಮುಡಾ ಪ್ರಕರಣದ ಅಂತಿಮ ವರದಿಯನ್ನು ಹೈಕೋರ್ಟ್‌ ಗೆ ಸಲ್ಲಿಸುವುದಾಗಿ ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ