ಮನೆ ರಾಜ್ಯ ಅಕ್ರಮ ಆಸ್ತಿ ಗಳಿಕೆ ಕೇಸ್‌ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!

ಅಕ್ರಮ ಆಸ್ತಿ ಗಳಿಕೆ ಕೇಸ್‌ – ಕೆಜಿಎಫ್ ಬಾಬುಗೆ ಲೋಕಾಯುಕ್ತ ನೋಟಿಸ್..!

0

ಬೆಂಗಳೂರು : ಸಚಿವ ಜಮೀರ್ ಅಹ್ಮದ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಕೆಜಿಎಫ್ ಬಾಬು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ.

ಈ ಪ್ರಕರಣದ ತನಿಖೆ ವೇಳೆ ಕೆಜಿಎಫ್ ಬಾಬು ಮತ್ತು ಜಮೀರ್ ಅಹ್ಮದ್ ನಡುವೆ ಹಣದ ವ್ಯವಹಾರ ನಡೆದಿರೋದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಕೆಜಿಎಫ್ ಬಾಬು ಅವರಿಗೆ ನೋಟಿಸ್ ನೀಡಿರುವ ಲೋಕಾಯುಕ್ತ ಅಧಿಕಾರಿಗಳು, 7 ದಿನಗಳ ಒಳಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿದ್ದಾರೆ.

ತನಿಖೆ ವೇಳೆ ಸಚಿವ ಜಮೀರ್ ಅಹ್ಮದ್‌ಗೆ ಕೆಜಿಎಫ್ ಬಾಬು ಅವರು 2013ರಲ್ಲಿ ಮನೆ ಖರೀದಿಗೆ 3.70 ಕೋಟಿ ರೂ. ಸಾಲ ನೀಡಿರುವುದು ತಿಳಿದುಬಂದಿದೆ. ಹಾಗಾಗಿ ಯಾವ ಕಾರಣಕ್ಕಾಗಿ ಹಣ ನೀಡಿದ್ದೀರಿ? ಇಬ್ಬರ ವ್ಯವಹಾರಗಳೇನು? ಈ ಸಂಬಂಧ ದಾಖಲೆ ಸಮೇತ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ.