ಮನೆ ಅಪರಾಧ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ಪರಿಶೀಲನೆ

ಬಳ್ಳಾರಿ ಜಿಲ್ಲಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ: ಪರಿಶೀಲನೆ

0

ಬಳ್ಳಾರಿ: ಬಾಣಂತಿಯರ ಸರಣಿ‌ ಸಾವಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Join Our Whatsapp Group

ಲೋಕಾಯುಕ್ತ ಅಧಿಕಾರಿ ಮಹಮ್ಮದ್ ರಫೀಕ್ ಸೇರಿ ಇತರೆ ಅಧಿಕಾರಿಗಳು ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ಔಷಧ ವಿತರಣಾ ವಿಭಾಗಕ್ಕೆ ಭೇಟಿ ಪರಿಶೀಲನೆ ನಡೆಸಿದರು.

ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಅಧಿಕಾರಿಗಳು ಮೂರು ಪ್ರತ್ಯೇಕ ತಂಡವಾಗಿ‌ ಪರಿಶೀಲನೆ ಮಾಡಿದ್ದಾರೆ.

ಜಿಲ್ಲಾಸ್ಪತ್ರೆಯ ಹೆರಿಗೆ ವಾರ್ಡ್, ಬಿಮ್ಸ್ ಅಸ್ಪತ್ರೆ ಮತ್ತು ಜಿಲ್ಲಾಸ್ಪತ್ರೆ ಅವರಣದ ವೆರ್ ಹೌಸ್ ನಲ್ಲಿ ಪರಿಶೀಲನೆ ಮಾಡಲಾಗಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದಲ್ಲಿ ಪರಿಶೀಲನೆ ಮಾಡಲಾಗಿದೆ.