ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಧೂಳಖೇಡ್ ಬಳಿಯಿರುವ ಆರ್.ಟಿ.ಓ. ಚೆಕ್ ಪೋಸ್ಟ್ ಮೇಲೆ ಅ.8ರ ಮಂಗಳವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಎಸ್.ಪಿ. ಮಲ್ಲೇಶ ನೇತೃತ್ವದಲ್ಲಿ ದಾಳಿ ಮಾಡಿರುವ ಅಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ದಾಖಲಾತಿಗಳ ಪರಿಶೀಲನೆ ಕೈಗೊಂಡಿದ್ದಾರೆ.
ಈ ಬಗ್ಗೆ ಲೋಕಾಯುಕ್ತ ಎಸ್.ಪಿ. ಮಲ್ಲೇಶ ಪ್ರತಿಕ್ರಿಯಿಸಿ, ದಾಖಲಾತಿ ಪರಿಶೀಲನೆ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.