ಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಆದಾಯ ಮೀರಿದ ಆಸ್ತಿ ಸಂಪಾದಿಸಿದ ಆರೋಪದಡಿಯಲ್ಲಿ ಸಾರಿಗೆ ಇಲಾಖೆಯ ಮಾಜಿ ಕಾನ್ ಸ್ಟೆಬಲ್ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಅಪಾರ ಪ್ರಮಾಣದ ಆಸ್ತಿ ಪತ್ತೆ ಮಾಡಿದ್ದಾರೆ.
ದಾಳಿಯ ವೇಳೆ 40 ಕೆ.ಜಿ ಬೆಳ್ಳಿಯ ಗಟ್ಟಿ ಹಾಗೂ ₹200 ಮೂಖಬೆಲೆ ನೋಟುಗಳ ಬಂಡಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.
ಲೋಕಾಯುಕ್ತ ಪೊಲೀಸರು ಗುರುವಾರವೂ ಮಧ್ಯಪ್ರದೇಶ ಸಾರಿಗೆ ಇಲಾಖೆಯ ಮಾಜಿ ಕಾನ್‌ಸ್ಟೆಬಲ್‌ವೊಬ್ಬರ ಮನೆ ಮೇಲೆ ದಾಳಿ ನಡೆಸಿ ₹2.85 ಕೋಟಿ ನಗದು ಸೇರಿದಂತೆ 3 ಕೋಟಿಗೂ ಹೆಚ್ಚು ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದ್ದರು.
ನಗದು ಜತೆಗೆ ₹50 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಸ್ತಿಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಡಿಎಸ್‌ಪಿ ತಿಳಿಸಿದ್ದಾರೆ.