ಮೈಸೂರು : ವಿಶ್ವ ವಿಖ್ಯಾತ ಮೈಸೂರು ಅರಮನೆ ಮಂಡಳಿ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಲೆಕ್ಕಕ್ಕೆ ಸಿಗದ ೪.೧೦ ಲಕ್ಷ ರೂ, ವಶ ಪಡಿಸಿಕೊಂಡಿದ್ದಾರೆ.
ಪ್ರವೇಶ ದ್ವಾರ ಹಾಗೂ ಪಾರ್ಕಿಂಗ್ ಲಾಟ್‌ನಲ್ಲಿ ಯಾವುದೇ ಲೆಕ್ಕ ಇಡದ ೪.೧೦ ಲಕ್ಷ ನಗದು ದೊರೆತಿದೆ. ಅರಮನೆ ಪ್ರವೇಶದ ಟಿಕೆಟ್ ಹಾಗೂ ಪಾರ್ಕಿಂಗ್‌ನಲ್ಲಿ ಸಾಕಷ್ಟು ಅವ್ಯವಹಾರ ನಡೆದಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಎಸ್ಪಿ ಸಚಿತ್ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆದಿದೆ. ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಮಡಿಕೇರಿ ಲೋಕಾಯುಕ್ತ ಡಿವೈಎಸ್ಪಿ ಗಳು, ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಶೋಧಕಾರ್ಯ ಮತ್ತಷ್ಟು ಮುಂದುವರಿದಿದೆ.