ಮನೆ ಕಾನೂನು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕನ ನಿವಾಸದ ಮೇಲೆ ಲೋಕಾಯುಕ್ತ ದಾಳಿ

0

ದಾವಣಗೆರೆ; ಜಿಲ್ಲಾ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಸಹಾಯಕ ನಿರ್ದೇಶಕ ಕಮಲ್ ರಾಜ್ ಅವರ ನಿವಾಸದ ಮೇಲೆ ಮಂಗಳವಾರ ಲೋಕಾಯುಕ್ತ ಪೊಲೀಸರು ಮಂಗಳವಾರ(ನ.12) ದಾಳಿ ನಡೆಸಿದ್ದಾರೆ.

Join Our Whatsapp Group

ದಾವಣಗೆರೆಯ ಶಕ್ತಿನಗರದ ಮೂರನೇ ಕ್ರಾಸ್ ನಲ್ಲಿರುವ ಕಮಲ್ ರಾಜ್ ನಿವಾಸ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅಕ್ರಮ ಆಸ್ತಿ ದೂರಿಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಲೋಕಾಯುಕ್ತ ಎಸ್ಪಿ ಎಂ.ಎಸ್.ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದೆ. ಕಮಲ್ ರಾಜ್ ನಿವಾಸದಲ್ಲಿ ಲೋಕಾಯುಕ್ತರು ದಾಖಲೆ ಹಾಗೂ ನಗದು ಪರಿಶೀಲಿಸಿ ದೂರು ದಾಖಲಿಸಿಕೊಂಡಿದ್ದಾರೆ.