ಹುಬ್ಬಳ್ಳಿ ಇ-ಸ್ವತ್ತು ಮತ್ತು ಭೂ ದಾಖಲೆಗಳ ವರ್ಗಾವಣೆ ಸೇರಿದಂತೆ ಇನ್ನಿತರ ದಾಖಲೆಗಳನ್ನು ಮಾಡಿಕೊಡುವಲ್ಲಿ ವಿಳಂಬ ಮಾಡಲಾಗುತ್ತಿದೆ ಎಂಬ ದೂರುಗಳನ್ನು ಆಧರಿಸಿ, ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ವಲಯಗಳ ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ 12 ವಲಯ ಕಚೇರಿಗಳನ್ನು ಹೊಂದಿದ್ದು, ಎಲ್ಲ ಕಚೇರಿಗಳ ಮೇಲೆ ಏಕಾಏಕಿ ದಾಳಿ ನಡೆಸಿ ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ಎಸ್. ಟಿ ನೇತೃತ್ವದಲ್ಲಿ ಪ್ರತ್ಯೇಕವಾಗಿ 12 ತಂಡಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇ- ಸ್ವತ್ತು ಕುರಿತಂತೆ ಸಾಕಷ್ಟು ಆರೋಪಗಳು ಮಹಾನಗರ ಪಾಲಿಕೆಯಲ್ಲಿ ಕೇಳಿಬಂದಿದ್ದವು. ದುಡ್ಡು ಕೊಟ್ಟರೆ ಮಾತ್ರ ಇ- ಸ್ವತ್ತು ನೀಡಲಾಗುತ್ತದೆ, ಇಲ್ಲವಾದರೆ ಅನಗತ್ಯ ವಿಳಂಬ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಇದರ ಅಧಾರದ ಮೇಲೆ ಅಧಿಕಾರಿಗಳು, ದೂರುಗಳಿಗೆ ಸಂಬಂಧಿಸಿದ ಅಗತ್ಯ ದಾಖಲಾತಿಗಳ್ನು ಪರಿಶೀಲಿಸುತ್ತಿದ್ದಾರೆ. ಹಾಗೂ ದಾವಣಗೆರೆ ರಾಜೀವ ಗಾಂಧಿ ಬಡಾವಣೆಯಲ್ಲಿರುವ ಮಹಾನಗರ ಪಾಲಿಕೆ ವಲಯ 1ರ ಮೇಲೆ ನಿನ್ನೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು ಎನ್ನವುದು ತಿಳಿದುಬಂದಿದೆ ಎನ್ನಲಅಗುತ್ತಿದೆ.
ಇದರಿಂದ ಪಾಲಿಕೆಯ ಅಧಿಕಾರಿಗಳು ಜನರಿಂದ ಅಧಿಕ ಹಣ ವಸೂಲಿ ಮಾಡುತ್ತಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಡಿವೈಎಸ್ಪಿ ಕಲಾವತಿ , ಸಿಪಿಐ ಗುರುಬಸವರಾಜ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಪಾಲಿಕೆಯ ಪ್ರತಿಯೊಬ್ಬ ಸಿಬ್ಬಂದಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದರು. ಎರಡು ವಾಹನದಲ್ಲಿ ಬಂದ 8ಕ್ಕೂ ಹೆಚ್ಚು ಲೋಕಾಯುಕ್ತ ಅಧಿಕಾರಿಗಳು, ಎಷ್ಟು ಈ ಸ್ವತ್ತು ಮಾಡಿಕೊಟ್ಟಿದ್ದೀರಿ. ಎಷ್ಟು ಪೆಂಡಿಂಗ್ ಇದೆ ಎಂಬುದಾಗಿ ಪಾಲಿಕೆ ಸಿಬ್ಬಂದಿಯನ್ನು ಪ್ರಶ್ನಿಸಿದ್ದರು. ಅಲ್ಲದೇ, ವಲಯ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಬ್ಯಾಂಕ್ ವಹಿವಾಟಿನ ಬಗ್ಗೆ ಪರಿಶೀಲನೆ ನಡೆಸಿದ್ದರು. ಈ ವೇಳೆ, ಬ್ಯಾಂಕ್ ಖಾತೆಯ ವಹಿವಾಟಿನ ಬಗ್ಗೆ ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪಾಲಿಕೆ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದರು ಎನ್ನಲಾಗಿದೆ. ನಿನ್ನೆ ಬೆಳಗ್ಗೆ ದಾಳಿ ಮಾಡಿದ ಲೋಕಾಯುಕ್ತ ಅಧಿಕಾರಿಗಳು ವಲಯ ಆಯುಕ್ತರಿಂದಲೂ ಮಾಹಿತಿ ಕಲೆ ಹಾಕಿದ್ದರು. ಈ ಕಚೇರಿಯಲ್ಲಿ ಹಣ ಹೆಚ್ಚು ಪಡೆಯುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದರು ಎನ್ನಲಾಗಿದೆ.
















