ಮನೆ ಅಪರಾಧ 10 ಕೋಟಿಗೂ ಹೆಚ್ಚು ನಷ್ಟದ ಆರೋಪ : ಗೃಹ ಮಂಡಳಿ ಇಂಜಿನಿಯರ್‌ರ ಮನೆಗೆ ಲೋಕಾಯುಕ್ತ ದಾಳಿ

10 ಕೋಟಿಗೂ ಹೆಚ್ಚು ನಷ್ಟದ ಆರೋಪ : ಗೃಹ ಮಂಡಳಿ ಇಂಜಿನಿಯರ್‌ರ ಮನೆಗೆ ಲೋಕಾಯುಕ್ತ ದಾಳಿ

0

ಬೆಂಗಳೂರು : ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕರ್ನಾಟಕ ಗೃಹ ಮಂಡಳಿ ಎಂಜಿನಿಯರ್ ಹಾಗೂ ಇತರ ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅದಿಕಾರಿಗಳು ದಾಳಿ ನಡೆಸಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಸರ್ಕಾರದ ಬೊಕ್ಕಸಕ್ಕೆ 10 ಕೋಟಿಗೂ ಹೆಚ್ಚು ನಷ್ಟವುಂಟು ಮಾಡಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಆರೋಪಿ ಅಧಿಅಕರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಯಲಹಂಕದ ಉಪನಗರದಲ್ಲಿರುವ ಕರ್ನಾಟಕ ಗೃಹ ಮಂಡಳಿಯ ಎಂಜಿನಿಯರ್ ಸೈಯದ್ ಅಜ್ಗರ್, ಗೋವಿಂದಯ್ಯ ಹಾಗೂ ಹರಣಿ ಸತೀಶ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.