ಮನೆ ರಾಜ್ಯ ಇಂದು ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

ಇಂದು ಇಂಜಿನಿಯರ್‌ಗೆ ಶಾಕ್‌ ಕೊಟ್ಟ ಲೋಕಾಯುಕ್ತ

0

ಶಿವಮೊಗ್ಗ : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ರೂಪ್ಲಾ ನಾಯ್ಕ್ ಅವರ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ನಗರದ ಬಸವನಗುಡಿಯಲ್ಲಿರುವ ಅವರ ಬಾಡಿಗೆ ಮನೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಚೇರಿ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ರೂಪ್ಲಾ ನಾಯ್ಕ್ ಅವರ ಕುಟುಂಬ ನೆಲೆಸಿರುವ ಬೆಂಗಳೂರಿನ ನಿವಾಸ ಹಾಗೂ ರೂಪ್ಲಾ ನಾಯ್ಕ್ ಅವರ ಸಹಾಯಕ ತಾಂಬೆ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೂ ಲೋಕಾಯುಕ್ತ ತಂಡ ದಾಳಿ ನಡೆಸಿದೆ. ಒಟ್ಟು ಆರು ತಂಡಗಳು ದಾಳಿ ನಡೆಸಿವೆ ಎನ್ನಲಾಗಿದೆ.