ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪುಣೆಗೆ ಭೇಟಿ ನೀಡಿದ್ದು, ಅವರಿಗೆ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಎನ್‌ಸಿಪಿ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ಹಿರಿಯ ನಾಯಕ ಶರದ್ ಪವಾರ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವೇದಿಕೆಯನ್ನು ಹಂಚಿಕೊಂಡಿದ್ದು ವಿಶೇಷವಾಗಿ ಕಂಡು ಬಂದಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರಶಸ್ತಿ ಜತೆಗೆ ಜವಾಬ್ದಾರಿ ಕೂಡ ಹೆಚ್ಚಾಗುತ್ತದೆ. ಈ ಲೋಕಮಾನ್ಯ ತಿಲಕ್ ರಾಷ್ಟ್ರೀಯ ಪ್ರಶಸ್ತಿಯನ್ನು 140 ಕೋಟಿ ಜನರಿಗೆ ಅರ್ಪಿಸುತ್ತೇನೆ. ಇದರೊಂದಿಗೆ ಪ್ರಶಸ್ತಿಯೊಂದಿಗೆ ಪಡೆದ ಮೊತ್ತವನ್ನು ನಮಾಮಿ ಗಂಗೆ ಯೋಜನೆಗೆ ನೀಡುವುದಾಗಿ ಘೋಷಣೆ ಮಾಡಿದರು.
Saval TV on YouTube