ಮನೆ ರಾಜ್ಯ ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್‌ ಜಾಮ್‌

ಚಾರ್ಮಾಡಿ ಘಾಟಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ – ಟ್ರಾಫಿಕ್‌ ಜಾಮ್‌

0

ಚಿಕ್ಕಮಗಳೂರು : ಚಾರ್ಮಾಡಿ ಘಾಟಿಯ 2 ಮತ್ತು 3ನೇ ತಿರುವಿನ ಬಳಿ ಒಂಟಿ ಸಲಗ ಕಾಣಿಸಿಕೊಂಡಿದೆ. ಇಂದು (ಶುಕ್ರವಾರ) ರಾತ್ರಿ ರಸ್ತೆಗೆ ಮರ ಕೆಡವಿ, ರಸ್ತೆಯಲ್ಲೇ ನಿಂತಿದ್ದರಿಂದ ಚಿಕ್ಕಮಗಳೂರು ಮತ್ತು ಮಂಗಳೂರು ಕಡೆಗೆ ಸುಮಾರು 2 ಕಿಲೋ ಮೀಟರ್‌ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೊಬೈಲ್ ನೆಟ್‌ವರ್ಕ್‌ ಇಲ್ಲದೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲು ಪ್ರವಾಸಿಗರು ಪರದಾಡಿದ್ದಾರೆ. ಕೆಲವರು ವಾಹನಗಳನ್ನು ವಾಪಸ್‌ ತಿರುಗಿಸಿಕೊಂಡು ತೆರಳಿದ್ದಾರೆ.

ಕಾಡಾನೆ ಕಾಣಿಸಿಕೊಂಡ ಹಿನ್ನೆಲೆ, ರಾತ್ರಿ ವೇಳೆ ಈ ಮಾರ್ಗದಲ್ಲಿ ಸಂಚರಿಸುವವರು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಹಿಂದೆಯೂ ಈ ಭಾಗದಲ್ಲಿ ಹಲವು ಬಾರಿ ಕಾಡಾನೆಗಳು ಕಾಣಿಸಿಕೊಂಡು ಆತಂಕ ಮೂಡಿಸಿದ್ದವು ಎನ್ನಲಾಗಿದೆ.