ಮನೆ ರಾಜ್ಯ ಬೆಂಗಳೂರು– ಮೈಸೂರು ದಶಪಥ ರಸ್ತೆಯಲ್ಲಿ ಲೋಪದೋಷ: ಕೆಲಸ ಪೂರ್ಣಗೊಂಡ ಬಳಿಕ ಉದ್ಘಾಟನೆ- ಸಿಎಂ

ಬೆಂಗಳೂರು– ಮೈಸೂರು ದಶಪಥ ರಸ್ತೆಯಲ್ಲಿ ಲೋಪದೋಷ: ಕೆಲಸ ಪೂರ್ಣಗೊಂಡ ಬಳಿಕ ಉದ್ಘಾಟನೆ- ಸಿಎಂ

0

ಬೆಂಗಳೂರು(Bengaluru): ಬೆಂಗಳೂರು– ಮೈಸೂರು ದಶಪಥ ರಸ್ತೆಯ ವೈಮಾನಿಕ ಸಮೀಕ್ಷೆಯಲ್ಲಿ ಲೋಪದೋಷಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಕೆಲಸವಾದ ನಂತರವೇ ಲೋಕಾರ್ಪಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಜೊತೆ ಚರ್ಚಿಸಿ, ಪರಿಸ್ಥಿತಿಗಳನ್ನು ಪರಿಶೀಲಿಸಿ ತೀರ್ಮಾನಕ್ಕೆ ಬರಲಾಗುವುದು ಎಂದರು.

ಬೆಳಗಾವಿಯಲ್ಲಿ ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವಾಹನ ಅಪಘಾತಕ್ಕೀಡಾಗಿ ಮೃತಪಟ್ಟ ಆರು ಮಂದಿಯ ಕುಟುಂಬಕ್ಕೆ ತಲಾ ₹ 5 ಲಕ್ಷ ಪರಿಹಾರ ನೀಡಲಾಗುವುದು. ಅಲ್ಲದೆ, ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲಾಡಳಿತದೊಂದಿಗೆ ಸಂಪರ್ಕದಲ್ಲಿದ್ದು, ಪ್ರಕರಣದ ತನಿಖೆ ಮಾಡಲು ಸೂಚಿಸಲಾಗಿದೆ ಎಂದರು.