ದಾವಣಗೆರೆ : ಮುರುಘಾ ಶ್ರೀಗಳು ಅಗಲಿದ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಬಳಿಕ ಶಾಮನೂರು ಕುಟುಂಬಸ್ಥರಿಗೆ ಶ್ರೀಗಳು ಸಾಂತ್ವನ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜೊತೆ ಮುರುಘಾ ಶ್ರೀಗಳು ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಶಾಮನೂರು ಅಮೂಲ್ಯ ಕೊಡುಗೆ ನೀಡಿದ್ದಾರೆ. ಸಮಾಜ ಸಂಘಟನೆಗೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದರು.
ಮುರುಘಾ ಶ್ರೀಗಳ ಜೊತೆ ಆಗಮಿಸಿ ಬಸವಪ್ರಭು ಸ್ವಾಮೀಜಿಗಳು ಸಹ ಅಂತಿಮ ದರ್ಶನ ಪಡೆದರು. ಶಿವಶಂಕರಪ್ಪನವರ ಅಂತ್ಯಸಂಸ್ಕಾರ ಇಂದು ಸಂಜೆ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ನಡೆಯಲಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದೆ.















