ಮನೆ ಸುದ್ದಿ ಜಾಲ ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಫೋಟ: ವಾಹನ ಸಂಚಾರ ಸ್ಥಗಿತ

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಫೋಟ: ವಾಹನ ಸಂಚಾರ ಸ್ಥಗಿತ

0

ಶಿವಮೊಗ್ಗ(Shivamogga): ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡು ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು.

ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ನಂತರ ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ.

ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ತೀರ್ಥಹಳ್ಳಿ ಕಡೆಯಲ್ಲೂ ದೊಡ್ಡ ಸಂಖ್ಯೆಯ ವಾಹನಗಳು ನಿಂತಿವೆ. ಸೋಮೇಶ್ವರದಲ್ಲಿ ಘಾಟಿಯ ಪ್ರವೇಶದಲ್ಲಿ ಪೊಲೀಸರು ವಾಹನಗಳನ್ನು ತಡೆ ಹಿಡಿದಿದ್ದಾರೆ. ಒಮ್ಮೆಗೆ ಕೆಲವು ವಾಹನಗಳನ್ನು ಘಾಟಿಯ ಮೇಲೆ ಬಿಡಲಾಗುತ್ತಿದೆ.

ಹಿಂದಿನ ಲೇಖನಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಬಾಲಕಿ ತಾಯಿ ಸೇರಿದಂತೆ ಮೂವರಿಗೆ ಶಿಕ್ಷೆ, ಬಾಲಕಿಗೆ 5 ಲಕ್ಷ ಪರಿಹಾರ
ಮುಂದಿನ ಲೇಖನಜಮೀನು ಸರ್ವೆ ಮಾಡಲು ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಆರೋಪಿಗಳು