ಮನೆ ರಾಜಕೀಯ ಕೈ ತಪ್ಪಿದ ಟಿಕೆಟ್: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ

ಕೈ ತಪ್ಪಿದ ಟಿಕೆಟ್: ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಬಿಜೆಪಿಗೆ ರಾಜೀನಾಮೆ

0

ಚಿಕ್ಕಮಗಳೂರು: ಈ ಬಾರಿ ವಿಧಾನಸಭೆ ಚುನಾವಣೆ ಟಿಕೆಟ್​ ಕೈತಪ್ಪಿದ್ದಕ್ಕೆ ಮೂಡಿಗೆರೆ ಶಾಸಕ ಎಂಪಿ ಕುಮಾರಸ್ವಾಮಿ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

Join Our Whatsapp Group

ಎಂಪಿ ಕುಮಾರಸ್ವಾಮಿ ಅವರು ಮತ್ತೊಮ್ಮೆ ಮೂಡಿಗೆರೆಯಿಂದ ಕಣಕ್ಕಿಳಿಯಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದರು. ಆದರೆ, ಕ್ಷೇತ್ರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದ್ದರಿಂದ ಬಿಜೆಪಿ ಹೈಕಮಾಂಡ್​, ದೀಪಕ್ ದೊಡ್ಡಯ್ಯ ಎನ್ನುವರಿಗೆ ಟಿಕೆಟ್​ ಘೋಷಣೆ ಮಾಡಿದೆ.

ಇದರಿಂದ ಅಸಮಧಾನಗೊಂಡ ಎಂಪಿ ಕುಮಾರಸ್ವಾಮಿ ಅವರು ಇಂದು ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಇನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಎಂ.ಪಿ.ಕುಮಾರಸ್ವಾಮಿ, ಯಡಿಯೂರಪ್ಪ ಇಲ್ಲದೆ ಬಿಜೆಪಿ 50 ಸ್ಥಾನವೂ ಗೆಲ್ಲುವುದಿಲ್ಲ. ಇನ್ನೆರಡು ದಿನಗಳಲ್ಲಿ ಕಾರ್ಯಕರ್ತರ ಜತೆ ಚರ್ಚಿಸಿ ಮುಂದಿನ ನಿರ್ಧಾರ ತಿಳಿಸುತ್ತೇನೆ. ನಾನೇನು ಸನ್ಯಾಸಿ ಅಲ್ಲ, ರಾಜಕೀಯ ಮಾಡಿ ತೋರಿಸುತ್ತೇನೆ ಎಂದು ಬಿಜೆಪಿಗೆ ಸವಾಲು ಹಾಕಿದ್ದಾರೆ.

ಹಿಂದಿನ ಲೇಖನವಿಧಾನಸಭಾ ಚುನಾವಣೆ: ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ
ಮುಂದಿನ ಲೇಖನಒಂದೇ ದಿನ 10 ಸಾವಿರ ನೂತನ ಕೋವಿಡ್ ಪ್ರಕರಣ ಪತ್ತೆ