ಮನೆ ರಾಜಕೀಯ ಮಸೀದಿಗಳ ಮೇಲಿನ ದ್ವನಿವರ್ಧಕ ವಿಚಾರ: ಕೋರ್ಟ್ ಆದೇಶ ಪಾಲಿಸುತ್ತೇವೆಂದ ಸಿಎಂ ಬೊಮ್ಮಾಯಿ

ಮಸೀದಿಗಳ ಮೇಲಿನ ದ್ವನಿವರ್ಧಕ ವಿಚಾರ: ಕೋರ್ಟ್ ಆದೇಶ ಪಾಲಿಸುತ್ತೇವೆಂದ ಸಿಎಂ ಬೊಮ್ಮಾಯಿ

0

ಕಲಬುರಗಿ(Kalburgi) : ಆಜಾನ್ ಬಗ್ಗೆ ಸುಪ್ರೀಂಕೋರ್ಟ್, ಹೈಕೋರ್ಟ್ ಆದೇಶ ಇದ್ದು, ಆದೇಶ ಪಾಲನೆ ಮಾಡುತ್ತೇವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಮೇ 9ರಿಂದ ಶ್ರೀರಾಮ‌ ಸೇನೆ ‘ಆಜಾನ್ ಸೇ ಆಜಾದಿ'(Azan se azadi) ಅಭಿಯಾನ ಪ್ರಾರಂಭಿಸಲು ಸಿದ್ದತೆ ನಡೆಸಿದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಮಸೀದಿಗಳ ಮೇಲಿನ ಧ್ವನಿವರ್ಧಕ ತೆರವುಗೊಳಿಸುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು.

ಯಾವ ಯಾವ ಸಂದರ್ಭದಲ್ಲಿ ಎಷ್ಟೆಷ್ಟು ಶಬ್ದದ ಡೆಸಿಬಲ್ ಇರಬೇಕು ಅಂತಾ ಸ್ಪಷ್ಟವಾಗಿ ಹೇಳಿದೆ. ಡಿಜಿ ಅವರು ಕೂಡ ಸರ್ಕ್ಯೂಲರ್ ಪಾಸ್ ಮಾಡಿದ್ದಾರೆ. ಠಾಣೆಯಲ್ಲಿ ಶಾಂತಿ ಸಭೆ ನಡೆಸೋದಕ್ಕೆ ಸೂಚಿಸಲಾಗಿದೆ. ಮಹಾ ಮಂಗಳಾರತಿ ಮಾಡುವುದರ ಬಗ್ಗೆ ಮುಂದೆ ನೋಡೋಣ ಎಂದು ಸಿಎಂ ಹೇಳಿದ್ದಾರೆ.

ಇನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರು ಇಡೋದಕ್ಕೆ ಭಿನ್ನಾಭಿಪ್ರಾಯದ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಹೆಸರು ಇಡುವ ವಿಚಾರದಲ್ಲಿ ಯಾವ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಯ ಕುರಿತು ಅಸಮಾಧಾನ ಬಗ್ಗೆ ಕೇಳಿದ ಪ್ರಶ್ನೆಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹಿಂದಿನ ಲೇಖನಮನೆಯ ಹತ್ತಿರ ಉಗುಳಿದ್ದಕ್ಕೆ ನೆರೆ ಮನೆಯ ಬಾಲಕನ ಕೊಲೆ
ಮುಂದಿನ ಲೇಖನಪಿಎಸ್ ಐ ಅಕ್ರಮ ನೇಮಕಾತಿ: ಪರೀಕ್ಷೆಯಲ್ಲಿ ಬ್ಲೂಟೂತ್ ಬಳಕೆ