ಮನೆ ಅಪರಾಧ ಕೊಪ್ಪದ ಲವ್ ಜಿಹಾದ್ ಪ್ರಕರಣ: ನೊಂದ ಯುವತಿಯಿಂದ ದೂರು ದಾಖಲು

ಕೊಪ್ಪದ ಲವ್ ಜಿಹಾದ್ ಪ್ರಕರಣ: ನೊಂದ ಯುವತಿಯಿಂದ ದೂರು ದಾಖಲು

0

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ನೊಂದ ಯುವತಿಯು ಮೂವರ ವಿರುದ್ಧ ಹರಿಹರಪುರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹರಿಹರ ಪೊಲೀಸ್ ಠಾಣೆಯಲ್ಲಿ ಕೊಪ್ಪ ಮೂಲದ ಮಹಮ್ಮದ್ ರೌಫ್ , ಇರ್ಫಾನ್ , ಸೈಫ್ ಸೇರಿದಂತೆ ನಾಲ್ಕು ಜನರ ಮೇಲೆ ದೂರು ನೀಡಿದ ಯುವತಿ ಮಹಮ್ಮದ್ ರೌಫ್ ಬಲವಂತವಾಗಿ ಅಮಲು ಪದಾರ್ಥಗಳ ಜ್ಯೂಸ್ ಕುಡಿಸಿ ತಾಳಿ ಕಟ್ಟಿ ನನ್ನನ್ನು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ ಎಂದಿದ್ದಾರೆ.

ಕಳೆದ ಮೂರು ವರ್ಷಗಳಿಂದ ನನಗೆ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ. ತಂಪು ಪಾನೀಯದಲ್ಲಿ ಅಮಲು ಪದಾರ್ಥವನ್ನು ಬೆರೆಸಿ ಬಲವಂತವಾಗಿ ಕುಡಿಸಿ ನನ್ನ ಫೋಟೋ ಹಾಗೂ ವಿಡಿಯೋ ತೆಗೆದು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ. ತಾಳಿ ಕಟ್ಟುವ ರೀತಿಯಲ್ಲೂ ಫೋಟೋ ತೆಗೆದುಕೊಂಡು ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ದೂರಿದ್ದಾಳೆ.

ಈಗ ಯುವಕ ವಿದೇಶದಲ್ಲಿ ಕುಳಿತು ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಅಪ್ಲೋಡ್ ಮಾಡುತ್ತಿದ್ದಾನೆ. ಇದರಿಂದ ನನ್ನ ಹಾಗೂ ಮನೆಯವರ ಮಾನಸಿಕ ನೆಮ್ಮದಿ ಹಾಳಾಗಿದೆ. ಕೂಡಲೇ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿರುವ ಫೋಟೋಗಳನ್ನು ಡಿಲಿಟ್ ಮಾಡಿ ಯುವಕ ಹಾಗೂ ಇನ್ನುಳಿದ ಇಬ್ಬರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾಳೆ.

ಹಿಂದಿನ ಲೇಖನಚುನಾವಣಾ ಆಯುಕ್ತರಾಗಿ ಅರುಣ್ ಗೋಯಲ್ ಅಧಿಕಾರ ಸ್ವೀಕಾರ
ಮುಂದಿನ ಲೇಖನಹಿರಿಯ ನ್ಯಾಯವಾದಿಗಳು ಕಿರಿಯ ವಕೀಲರನ್ನುಆಳುಗಳಂತೆ ನಡೆಸಿಕೊಳ್ಳಬಾರದು: ಸಿಜೆಐ ಡಿ ವೈ ಚಂದ್ರಚೂಡ್