ನವದೆಹಲಿ(New delhi): ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು ಸೋಮವಾರ 36 ರೂ. ಇಳಿಕೆ ಮಾಡಲಾಗಿದೆ.
ಇದರಿಂದಾಗಿ ವಾಣಿಜ್ಯ ಬಳಕೆಯ 19 ಕೆ.ಜಿ. ಎಲ್ಪಿಜಿ ಸಿಲಿಂಡರ್ ದರ 2012.50 ರೂ.ಗಳ ಬದಲಾಗಿ 1,976 ರೂ. ಆಗಿದೆ. ಸ್ಥಳೀಯ ಮಾರಾಟ ತೆರಿಗೆಗೆ ಅನುಗುಣವಾಗಿ ರಾಜ್ಯದಿಂದ ರಾಜ್ಯಕ್ಕೆ ಬೆಲೆಯಲ್ಲಿ ವ್ಯತ್ಯಾಸ ಆಗಲಿದೆ. ಗೃಹ ಬಳಕೆಯ ಎಲ್ಪಿಜಿ ಸಿಲಿಂಡರ್ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಪ್ರಕಾರ, 19 ಕೆಜಿ ತೂಕದ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 36 ರೂ. ಕಡಿತಗೊಳಿಸಲಾಗಿದೆ. ರೆಸ್ಟೋರೆಂಟ್ಗಳು, ಹೋಟೆಲ್ಗಳು, ಡಾಬಾಗಳು ಮತ್ತು ಇತರ ವಾಣಿಜ್ಯ ಬಳಕೆದಾರರಿಗೆ ಇದರ ಲಾಭ ಸಿಗಲಿದೆ.