Saval TV on YouTube
ನಾಗಮಂಗಲ(Naagamangala): ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಕಾಂಗ್ರೆಸ್, ಜೆಡಿಎಸ್ ಗಿಂತ ಹೆಚ್ಚು ಮತ ಗಳಿಸದಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ತಿಳಿಸಿದರು.
ನಾಗಮಂಗಲದಲ್ಲಿ ಇಂದು ಮಾತನಾಡಿದ ಅವರು, 15 ವರ್ಷದಿಂದ ಎಂಎಲ್ ಎ ಕನಸು ಆಸೆ ಬಿಚ್ಚಿಟ್ಟಿದ್ದೆ. ಮುಂದಿನ ಚುನಾವಣೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸುತ್ತೇನೆ. ಕಾಂಗ್ರೆಸ್ ಜೆಡಿಎಸ್ ಗಿಂತ ಹೆಚ್ಚು ಮತ ಪಡೆದು ಗೆಲ್ಲುತ್ತೇನೆ. ಹೆಚ್ಚು ಮತಗಳ ಅಂತರದಿಂದ ಗೆಲ್ಲದಿದ್ದರೇ ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದರು.














