ಪಾಟ್ನಾ : ಬಿಹಾರದ 43ನೇ ರಾಜ್ಯಪಾಲರಾಗಿ ನಿವೃತ್ತ ಲೆಫ್ಟಿನೆಂಟ್ ಜನರಲ್ ಸಯ್ಯದ್ ಅತಾ ಹಸ್ನೈನ್ ಇಂದು (ಶನಿವಾರ) ಪ್ರಮಾಣವಚನ ಸ್ವೀಕರಿಸಿದರು.
ಇಲ್ಲಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಗಮ್ ಕುಮಾರ್ ಸಾಹೂ, ಸಯ್ಯದ್ ಅವರಿಗೆ ಪ್ರಮಾಣವಚನ ಬೋಧಿಸಿದರು. ಈ ಹಿಂದೆ ಅರಿಫ್ ಮೊಹಮ್ಮದ್ ಖಾನ್ ರಾಜ್ಯಪಾಲರಾಗಿದ್ದರು.
ಸಮಾರಂಭದಲ್ಲಿ ಮುಖ್ಯಮಮಂತ್ರಿ ನಿತೀಶ್ ಕುಮಾರ್, ಸಚಿವ ಸಂಪುಟದ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸಯ್ಯದ್ ಹಸ್ನೈನ್ ಭಾರತೀಯ ಸೇನೆಯಲ್ಲಿ ಹಲವು ಹುದ್ದೆಗಳನ್ನು ನಿರ್ವಹಿಸಿದ್ದರು. ನಿವೃತ್ತಿ ಬಳಿಕ 2018ರಲ್ಲಿ ಕಾಶ್ಮೀರ ಕೇಂದ್ರ ವಿಶ್ವವಿದ್ಯಾಲಯದ ಕುಲಪತಿಯಾಗಿದ್ದರು.















