ಮನೆ ಕಾನೂನು ಮತದಾರರಿಗೆ ಆಮಿಷ: ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ​​ಗೆ ಅರ್ಜಿ

ಮತದಾರರಿಗೆ ಆಮಿಷ: ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್ ​​ಗೆ ಅರ್ಜಿ

0

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್ ​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Join Our Whatsapp Group

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

ಹಿಂದಿನ ಲೇಖನಗೊಡಚಿನಮಲ್ಕಿ ಜಲಪಾತ
ಮುಂದಿನ ಲೇಖನವಿಟಮಿನ್ ಸಿ ಕೊರತೆಯನ್ನು ನೀಗಿಸಲು ಈ ಹಣ್ಣು ಸೇವಿಸಿ