ಮನೆ ರಾಜಕೀಯ ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ: ಸಿದ್ದರಾಮಯ್ಯ

ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ: ಸಿದ್ದರಾಮಯ್ಯ

0

ಮೈಸೂರು: ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೆ ಬಿಜೆಪಿ ಮನೆದೇವ್ರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು, ನಾನು ಲೋಕಾಯುಕ್ತ ಬಂದ್ ಮಾಡಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ.

ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇದ್ದರು. ಎಲ್ಲಾ ಸತ್ಯ ಗೊತ್ತಿದ್ದರು ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ. ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ಬಿಜೆಪಿ ಸರ್ಕಾರವಲ್ಲ. ನ್ಯಾಯಾಲಯ ಎಸಿಬಿ ರದ್ದು ಮಾಡಿದ್ದು ಎಂದು ಕುಟುಕಿದರು.

ಮಾಡಾಳ್ ವಿರೂಪಾಕ್ಷಪ್ಪನನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷ ಎಲ್ಲಿದ್ದಾನೆಂದು ಸರ್ಕಾರಕ್ಕೆ ಗೊತ್ತಿದೆ. ಅವನು ಅವನ ಮನೆಯಲ್ಲೇ ಓಡಾಡಿಕೊಂಡಿದ್ದಾನೆ. ಅವನನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ. ಲುಕ್ ಔಟ್ ನೋಟೀಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವನನ್ನು ಯಾಕೆ ಬಂಧಿಸಲಿಲ್ಲ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರು ಮೈಸೂರು- ಬೆಂಗಳೂರು ದಶಪಥ ರಸ್ತೆ ಪರಿಶೀಲನೆಗೆ ಮುಂದಾಗಿದ್ದು, ಇದರ ಕ್ರೆಡಿಟ್ ನಮಗೆ ಸಲ್ಲಬೇಕು ಎಂದಿದ್ದಾರೆ.

ಮಾರ್ಚ್ 9 ರಂದು ಬೆಂಗಳೂರು ಮೈಸೂರು ಹೈವೆ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೆ ಸಲ್ಲಬೇಕು. ಪ್ರತಾಪ ಸಿಂಹನದಾಗಲಿ ಬಿಜೆಪಿ ಸರ್ಕಾರದಾಗಲಿ ಯಾವ ಪಾತ್ರವೂ ಇಲ್ಲ. ಪ್ರತಾಪ ಸಿಂಹ ಲೋಕಸಭಾ ವ್ಯಾಪ್ತಿಗೆ ಕೆಲವೇ ಕಿ.ಮೀ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಮಹದೇವಪ್ಪನಿಗೆ ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪ ಮುಂದೆ ನಿಂತು ಈ ರಸ್ತೆ ಮಾಡಿಸಿದ ಎಂದು ಸಿದ್ದರಾಮಯ್ಯ ಹೇಳಿದರು.

ಹಿಂದಿನ ಲೇಖನಬಂಟ್ವಾಳ :  ಹಲವೆಡೆ ಎನ್ ಐಎ ದಾಳಿ, ಪರಿಶೀಲನೆ
ಮುಂದಿನ ಲೇಖನಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಕ್ರಮಕ್ಕೆ ವರದಿ ಸಲ್ಲಿಕೆ: ಬಿ.ಎಸ್ ಯಡಿಯೂರಪ್ಪ