ಮದ್ದೂರು: ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರ್‌ಗೆ ದಿಡೀರ್ ಬೆಂಕಿ ಕಾಣಿಸಿಕೊಂಡ ಪರಿಣಾಮವಾಗಿ ದಂಪತಿಗಳು ಅಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಎಲ್.ಐ.ಸಿ ಕಚೇರಿ ಬಳಿ ಶುಕ್ರವಾರ ಮಧ್ಯಾಹ್ನ ಜರುಗಿದೆ.
ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ ಹೈವೆನಲ್ಲಿ ಸಂಚರಿಸುತ್ತಿದ್ದ ಫೋರ್ಡ್ ಟೆಟಾನಿಯಂ ಕಾರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಇಂಜಿನ್‌ನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡ ಬಳಿಕ ರಸ್ತೆ ಬದಿಗೆ ಕಾರನ್ನು ನಿಲ್ಲಿಸಿ ಪರಿಶೀಲಿಸಿದಾಗ ದಿಢೀರ್ ಹತ್ತಿಕೊಂಡು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ.
ಕಾರನ್ನು ಚಲಾಯಿಸುತ್ತಿದ್ದ ಬೆಂಗಳೂರು ಮೂಲದ ಮನೋಹರ್ ಹಾಗೂ ಈತನ ಪತ್ನಿ ಅಪಾಯದಿಂದ ಪಾರಾಗಿದ್ದು ಘಟನಾ ಸ್ಥಳಕ್ಕೆ ಅಗ್ನಿಶಾಮಕ ಠಾಣೆಯ ಸಿಬ್ಬಂಧಿಗಳು ಭೇಟಿ ನೀಡಿ ಬೆಂಕಿ ನಂದಿಸುವಷ್ಟರಲ್ಲಿ ಕಾರು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದ್ದು ಈ ಸಂಬಂಧ ಮದ್ದೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














